Advertisement

ಬಾಲಿವುಡ್‌ ನಟಿ ಊರ್ಮಿಳಾ ಮಾತೊಂಡ್ಕರ್‌ ಕಾಂಗ್ರೆಸ್‌ ಸೇರ್ಪಡೆ

09:11 AM Mar 29, 2019 | Team Udayavani |

ಮುಂಬೈ: ಬಾಲಿವುಡ್‌ ನಟಿ ಊರ್ಮಿಳಾ ಮಾತೊಂಡ್ಕರ್‌ ಅವರು ಪಕ್ಷಾಧ್ಯಕ್ಷ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದಿಂದ ಊರ್ಮಿಳಾ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Advertisement

ಮುಂಬಯಿ ಕಾಂಗ್ರೆಸ್‌ ಅಧ್ಯಕ್ಷ ಮಿಲಿಂದ್‌ ದೇವ್ರಾ, ಪಕ್ಷದ ವಕ್ತಾರ ಪ್ರಿಯಾಂಕ ಚತುರ್ವೇದಿ ಮತ್ತು ರಣದೀಪ್‌ ಸುರ್ಜೆವಾಲ ಅವರ ಸಮ್ಮುಖದಲ್ಲಿ ರಾಹುಲ್‌ ಗಾಂಧಿ ಅವರು ಊರ್ಮಿಳಾ ಅವರನ್ನು ಪಕ್ಷಕ್ಕೆ ಹಾರ್ಧಿಕವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಈ ಬಾಲಿವುಡ್‌ ನಟಿ ‘ಪಕ್ಷಕ್ಕೆ ನನ್ನನ್ನು ಹಾರ್ಧಿಕವಾಗಿ ಸ್ವಾಗತಿಸಿದ ರಾಹುಲ್‌ ಗಾಂಧಿ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಇವತ್ತು ನನ್ನ ಪಾಲಿಗೆ ಮಹತ್ವದ ದಿನ ಯಾಕೆಂದರೆ ನಾನಿವತ್ತು ಸಕ್ರಿಯ ರಾಜಕಾರಣಕ್ಕೆ ಕಾಲಿಡುತ್ತಿದ್ದೇನೆ. ನನ್ನ ವ್ಯಕ್ತಿತ್ವ ಹಾಗೂ ಯೋಚನೆಗಳು ಮಹಾತ್ಮಾ ಗಾಂಧೀಜಿ, ಜವಹರಲಾಲ್‌ ನೆಹರೂ ಮತ್ತು ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಚಿಂತನೆಗಳಿಂದ ಪ್ರಭಾವಿತಗೊಂಡಿದೆ’ ಎಂದು ಊರ್ಮಿಳಾ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ‘ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವದಲ್ಲಿ ಅಡಕವಾಗಿರುವ ಸ್ವಾತಂತ್ರ್ಯದ ಮಹತ್ವದ ಕುರಿತಾಗಿ ನನಗೆ ಪ್ರತೀ ಹಂತದಲ್ಲಿಯೂ ಹೇಳಿಕೊಡಲಾಗಿತ್ತು. ಇವತ್ತು ಜನರ ಮನಸ್ಸಿನಲ್ಲಿ ಈ ಕುರಿತಾಗಿ ಹಲವಾರು ಗೊಂದಲಗಳಿವೆ ಆ ಕಾರಣಕ್ಕಾಗಿಯೇ ನಾನು ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವ ನಿರ್ಧಾರವನ್ನು ಮಾಡಿದೆ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ರಾಜಕೀಯ ಪಕ್ಷಗಳು ಆಕರ್ಷಣೆ ಮತ್ತು ಅಭಿಮಾನಿ ಬಳಗವನ್ನು ಓಲೈಸುವ ಸಲುವಾಗಿ ಬಾಲಿವುಡ್‌ ನಟ ನಟಿಯರನ್ನು ತಮ್ಮ ತಮ್ಮ ಪಕ್ಷಕ್ಕೆ ಆಹ್ವಾನಿಸುತ್ತವೆ ಎಂಬ ಅಂಶವನ್ನು ಊರ್ಮಿಳಾ ಅವರು ಒಪ್ಪಿಕೊಂಡರೂ ತನ್ನ ರಾಜಕೀಯ ಪ್ರವೇಶ ಮಾತ್ರ ದೇಶಕ್ಕೆ ಸೇವೆ ಸಲ್ಲಿಸುವ ಉದ್ದೇಶವನ್ನು ಹೊಂದಿದೆ ಎಂದು ಅವರು ಪರ್ತಕತ್ರರಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next