Advertisement

Bollywood ಹಿರಿಯ ನಟ ಅಮಿತಾಭ್‌ ಬಚ್ಚನ್‌ಗೆ ಆ್ಯಂಜಿಯೋ ಪ್ಲಾಸ್ಟಿ ಚಿಕಿತ್ಸೆ

12:52 AM Mar 16, 2024 | Team Udayavani |

ಮುಂಬಯಿ: ಬಾಲಿವುಡ್‌ ಹಿರಿಯ ನಟ ಅಮಿತಾಭ್‌ ಬಚ್ಚನ್‌(81) ಶುಕ್ರವಾರ ಇಲ್ಲಿನ ಕೋಕಿಲಾಬೆನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ್ಯಂಜಿ­ಯೋಪ್ಲಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿ­ದ್ದಾರೆ.

Advertisement

ಬಿಗ್‌ ಬಿ ಖ್ಯಾತಿಯ ಬಚ್ಚನ್‌, ತಾವು ಆಸ್ಪತ್ರೆಗೆ ದಾಖಲಾದ ಸುದ್ದಿ ವೈರಲ್‌ ಆಗುವ ಕೆಲವೇ ಕ್ಷಣಗಳ ಮುನ್ನ “ಎಂದೆಂದಿಗೂ ಕೃತಜ್ಞನಾಗಿರುವೆ’ ಎಂದು ಟ್ವೀಟ್‌ ಮಾಡಿದ್ದು, ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಲು ಈ ಪೋಸ್ಟ್‌ ಹಂಚಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next