ಈ ಬಗ್ಗೆ ಮಾಹಿತಿ ನೀಡಿರುವ ನಾಸೀರುದ್ದೀನ್ ಮ್ಯಾನೇಜರ್, ಎರಡು ದಿನಗಳ ಹಿಂದೆಯೇ ನಾಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ನಟನಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಕಳೆದ ವರ್ಷ ನಾಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ನಂತರ ನಾಸೀರುದ್ಧೀನ್ ಪುತ್ರ ವಿವಾನ್ ಶಾ ಈ ಸುದ್ದಿ ಸುಳ್ಳು ಎಂದು ಹೇಳಿದ್ದರು.
ನಾಸೀರುದ್ದೀನ್ ಶಾ ಅವರ ಸಾಧನೆಯನ್ನು ಮೆಚ್ಚಿ ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
Advertisement