ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿಯ ಮೇಲೆ ಬಾಂಬ್ ಎಸೆಯಲಾಗಿದೆ.
ಮಂಗಳವಾರ ಮುಂಜಾನೆ ಈ ಘಟನೆ ನಡೆದಿದೆ. ದಾಳಿಯಲ್ಲಿ ಕಚೇರಿಯ ಕಿಟಕಿಯ ಗಾಜುಗಳೂ ಒಡೆದಿವೆ.
ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌ಎಸ್‌ಎಸ್ ಕಚೇರಿಯ ಮೇಲೆ ಬಾಂಬ್ ದಾಳಿ ನಡೆದಿದೆ. ಕಟ್ಟಡದ ಕಿಟಕಿ ಗಾಜುಗಳು ಮುರಿದು ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ ಎಂದು ಪಯ್ಯನ್ನೂರು ಪೊಲೀಸರು ತಿಳಿಸಿದ್ದಾರೆ.
ಮಧ್ಯರಾತ್ರಿ 1.30ರ ಸುಮಾರಿಗೆ ಇಬ್ಬರು ಬೈಕ್ ಸವಾರರು ರಾಷ್ಟ್ರೀಯ ಭವನ ಎಂದು ಕರೆಯಲ್ಪಡುವ ಪಯ್ಯನ್ನೂರಿನ ಆರ್‌ಎಸ್‌ಎಸ್ ಕಚೇರಿಯ ಮೇಲೆ ಸ್ಥಳೀಯವಾಗಿ ತಯಾರಿಸಿದ ಬಾಂಬ್ ಎಸೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ನೌ ವರದಿ ಮಾಡಿದೆ.
ಇದನ್ನೂ ಓದಿ:ನೆರೆಹಾನಿ: ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ
ಈ ಪ್ರದೇಶವು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆಯ ಇತಿಹಾಸವನ್ನು ಹೊಂದಿದೆ. 2010 ರಿಂದ 2016 ರ ನಡುವೆ ಈ ಪ್ರದೇಶದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಲವಾರು ದಾಳಿಗಳು ನಡೆದಿವೆ.