Advertisement

ಪಾಕಿಸ್ಥಾನದ ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೂವರು ಸಾವು, 20 ಮಂದಿಗೆ ಗಾಯ

04:55 PM Sep 05, 2021 | Team Udayavani |

ಇಸ್ಲಮಾಬಾದ್: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬರ್ ಒಬ್ಬ ಮೋಟಾರ್ ಬೈಕ್ ನಲ್ಲಿ ಬಂದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದರಿಂದ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ ಪಿ ವರದಿ ಮಾಡಿದೆ.

Advertisement

ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ದಾಳಿಯ ಹೊಣೆ ಹೊತ್ತಿದೆ. ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ 25 ಕಿಲೋಮೀಟರ್ ದೂರದಲ್ಲಿರುವ ಕ್ವೆಟ್ಟಾ-ಮಸ್ತುಂಗ್ ರಸ್ತೆಯಲ್ಲಿರುವ ಅರೆಸೈನಿಕ ಗಡಿನಾಡು ದಳದ ಸಿಬ್ಬಂದಿಯಿರುವ ಚೆಕ್‌ ಪೋಸ್ಟ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಎಎಫ್ ಪಿ ತಿಳಿಸಿದೆ.

ಆತ್ಮಹತ್ಯಾ ಬಾಂಬರ್ ತನ್ನ ಬೈಕ್ ಅನ್ನು ಚೆಕ್‌ಪೋಸ್ಟ್‌ನ ಭದ್ರತಾ ಪಡೆಗಳ ವಾಹನಕ್ಕೆ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಮೂವರು ಅರೆಸೇನಾಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಘಟನೆಯನ್ನು ಖಂಡಿಸಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದು, ಹುತಾತ್ಮರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಗೊಂಡವರ ಚೇತರಿಕೆಗೆ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:700 ತಾಲಿಬಾನ್ ಉಗ್ರರನ್ನು ಕೊಂದು, 600 ಉಗ್ರರನ್ನು ಸೆರೆಹಿಡಿದ ಪಂಜ್ ಶೀರ್ ಯೋಧರು

Advertisement

ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಭದ್ರತಾ ಪಡೆಗಳು ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿವೆ. ಹುತಾತ್ಮರಿಗೆ ಇಡೀ ರಾಷ್ಟ್ರ ಋಣಿಯಾಗಿದೆ. ನಾವು ನಮ್ಮ ಸಂಪೂರ್ಣ ಶಕ್ತಿಯಿಂದ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದೇವೆ ಮತ್ತು ಅದನ್ನು ಇನ್ನೂ ಮುಂದುವರಿಸುತ್ತೇವೆ. ಈ ಹಿಂಸಾತ್ಮಕ ದಾಳಿಗಳು ಭದ್ರತಾ ಪಡೆಗಳ ಮನೋಬಲವನ್ನು ಕಡಿಮೆ ಮಾಡುವುದಿಲ್ಲ ಎಂದು ಬಲೂಚಿಸ್ಥಾನದ ಗೃಹ ಸಚಿವ ಮಿರ್ ಜಿಯಾವುಲ್ಲಾ ಹೇಳಿಕೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next