ಮುಂಬಯಿ, ಜ. 13: “ಬೊಂಬಾಯಿಡ್ ತುಳುನಾಡ್”ವಿಶ್ವ ಮಟ್ಟದ ತುಳು ಸಮ್ಮೇಳನದ ಪೂರ್ವ ಭಾವಿ ಸಭೆಯು ಎರ್ಮಾಳ್ ಹರೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಸಂಸದ ಗೋಪಾಲ್ ಶೆಟ್ಟಿ, ಸ್ಥಳೀಯ ಶಾಸಕ ಸುನಿಲ್ ರಾಣೆ, ಕಲಾಜಗತ್ತು ಸಂಸ್ಥೆಯ ಅಧ್ಯಕ್ಷರಾದ ತೋನ್ಸೆ ವಿಜಯ ಕುಮಾರ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರ ಉಪಸ್ಥಿತಿಯಲ್ಲಿ ಜ. 12ರಂದು ಸಂಜೆ ಕಾಂದಿವಲಿಯ ಪೊಯಿಸರ್ ಜಿಮ್ಖಾನದಲ್ಲಿ ಜರಗಿತು.
ಜ. 18 ಹಾಗೂ 19ರಂದು ಕಾಂದಿವಲಿ ಪಶ್ಚಿಮದ ಪೊಯಿಸರ್ ಜಿಮ್ಖಾನದ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿರುವ ವಿಶ್ವ ಮಟ್ಟದ ತುಳು ಸಮ್ಮೇಳನ ಬೊಂಬಾಯಿಡ್ ತುಳುನಾಡ್ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಕುರಿತು ಸಭೆಯಲ್ಲಿ ಸೇರಿದ ಸುಮಾರು 200ಕ್ಕೂ ಹೆಚ್ಚು ಸದಸ್ಯರು ಹಾಗೂ ಮುಖಂಡರ ನಡುವೆ ಚರ್ಚಿಸಿ ನಿರ್ಣಯಿಸಲಾಯಿತು.
ಎರಡು ದಿನಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಉಪ ಸಮಿತಿಗಳನ್ನು ರಚಿಸಿ ಅಚ್ಚುಕಟ್ಟಾದ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಲಾಯಿತು. ಕಲಾಜಗತ್ತು ಸಂಸ್ಥೆಯ ಪದಾಧಿಕಾರಿಗಳಾದ ಕಾರ್ಯಾಧ್ಯಕ್ಷ ಸುರೇಂದ್ರ ಕುಮಾರ್ ಹೆಗ್ಡೆ, ಉಪ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ, ಗೌರವ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ, ಕೋಶಾಧಿಕಾರಿ ಜಗದೀಶ್ ರಾವ್, ಜತೆ ಕಾರ್ಯದರ್ಶಿ ಚಂದ್ರಾವತಿ ದೇವಾಡಿಗ, ಜತೆ ಕಾರ್ಯದರ್ಶಿ ಲತೀಶ್ ಪೂಜಾರಿ, ಜತೆ ಕೋಶಾಧಿಕಾರಿ ಪ್ರಥ್ವಿರಾಜ್ ಮುಂಡ್ಕೂರು, ಜೊತೆ ಕೋಶಾಧಿಕಾರಿ ಅಶೋಕ್ ಶೆಟ್ಟಿ ಪಾಂಗಳ ಹಾಗೂ ಸಮಿತಿಯ ಸದಸ್ಯರು ಮತ್ತು ಜಯಕರ ಪೂಜಾರಿ, ಲತಾ ಸಂತೋಷ್ ಶೆಟ್ಟಿ, ಶೈಲಜಾ ಶೆಟ್ಟಿ, ವಿನೋದಾ ಡಿ. ಶೆಟ್ಟಿ, ಪೇತ್ರಿ ವಿಶ್ವನಾಥ ಶೆಟ್ಟಿ, ಶುಭಾಂಗಿ ಶೆಟ್ಟಿ, ಸಂತೋಷ್ ಮುದ್ರಾಡಿ ಹಾಗೂ ಇನ್ನಿತರ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು