ಮುಂಬೈ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಹೋರಾಟಗಾರ ವರವರ ರಾವ್ (81) ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಿದೆ.
ಅನಾರೋಗ್ಯಕ್ಕೆ ಒಳಗಾಗಿದ್ದ ವರವರ ರಾವ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕೆಂದು ಪತ್ನಿ ಮನವಿ ಮಾಡಿದ್ದರು.
ಬಾಂಬೆ ಹೈಕೋರ್ಟ್‌ನಲ್ಲಿ ಬುಧವಾರ ನಡೆದ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲ ದೀಪಕ್ ಠಾಕ್ರೆ ಅನಾರೋಗ್ಯಕ್ಕೆ ಒಳಗಾಗಿರುವ ರಾವ್ ಅವರನ್ನು ಇನ್ನು 15 ದಿನಗಳ ಒಳಗಾಗಿ ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ರಾವ್ ಪರವಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಜೈಸಿಂಗ್ ವಾದಿಸಿದ್ದರು.