Advertisement
ಇದು ಕಳೆದ ವರ್ಷ ಡಿಸೆಂಬರ್‌ನಲ್ಲಿ ಮುಂಬಯಿಗೆ ಭೇಟಿ ನೀಡಿದ್ದ ಮಮತಾ ಬ್ಯಾನರ್ಜಿ, ಆ ಸಂದರ್ಭದಲ್ಲಿ ಶಿವಸೇನೆ ಹಾಗೂ ಎನ್‌ಸಿಪಿ ನಾಯಕರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಅವರು ಸಮಾರಂಭ ವೊಂದರಲ್ಲಿ ಭಾಗಿಯಾಗಿದ್ದರು. ಆ ಸಮಾರಂಭ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗಿಸಲಾಗಿತ್ತು. ಆಗ ಮಮತಾ ಬ್ಯಾನರ್ಜಿಯವರು ಕುಳಿತೇ ಇದ್ದರು ಎಂದು ಮುಂಬಯಿಯ ಬಿಜೆಪಿ ನಾಯಕ ವಿವೇಕಾನಂದ ಗುಪ್ತಾ ಎಂಬುವರು ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. 2015ರಲ್ಲಿ ಕೇಂದ್ರ ಗೃಹ ಇಲಾ ಖೆಯು, ರಾಷ್ಟ್ರಗೀತೆ ಮೊಳಗುವಾಗ ಅಥವಾ ಹಾಡುವಾಗ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕೆಂದು ಹೇಳಿದೆ. ಆದರೂ ಮಮತಾ ಅಗೌರವ ತೋರಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಧ್ಯಕ್ಷೆಯಾಗಿ ಬುಧವಾರ ಪುನರಾಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷೆಯಾಗಿ ಐದು ವರ್ಷಗಳು ಸಂದ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷೀಯ ಪಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಮಮತಾ ಬ್ಯಾನರ್ಜಿಯವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದಾಗಿ ಅವಿರೋಧವಾಗಿ ಅವರೇ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ತಿಳಿಸಿದ್ದಾರೆ.