Advertisement

ಬಿಲ್ ಗೇಟ್ಸ್ ಗೆ ನೋಟಿಸ್ ಜಾರಿ ಮಾಡಿದ ಬಾಂಬೆ ಹೈಕೋರ್ಟ್

09:24 AM Sep 03, 2022 | Team Udayavani |

ಮುಂಬೈ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್‌ ಗೆ ಶುಕ್ರವಾರ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ. ಕೋವಿಡ್ ಲಸಿಕೆ ಕೋವಿಶೀಲ್ಡ್‌ ನ ಅಡ್ಡ ಪರಿಣಾಮಗಳಿಂದ ತನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ದಿಲೀಪ್ ಲುನಾವತ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಈ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದೆ.

Advertisement

ನಷ್ಟ ಪರಿಹಾರವಾಗಿ 1000 ಕೋಟಿ ನೀಡಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ.

ಭಾರತ ಮತ್ತು ಇತರ ತೃತೀಯ ಜಗತ್ತಿನ ದೇಶಗಳಿಗೆ 100 ಮಿಲಿಯನ್ ಡೋಸ್ ಕೋವಿಶೀಲ್ಡ್ ಲಸಿಕೆಗಳ ತಯಾರಿಕೆ ಮತ್ತು ವಿತರಣೆಯ ಪ್ರಕ್ರಿಯೆಯನ್ನು ವೇಗಗೊಳಿಸಲು, 2020 ರಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ ನೊಂದಿಗೆ ಪಾಲುದಾರಿಕೆಗೆ ಒಳಪಟ್ಟಿತ್ತು.

ಭಾರತದ ಕೇಂದ್ರ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ, ಡ್ರಗ್ ಕಂಟ್ರೋಲರ್ ಜನರಲ್ ಡಾ ವಿಜಿ ಸೋಮಾನಿ ಮತ್ತು ಎಐಐಎಂಎಸ್ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ಅವರನ್ನು ಅರ್ಜಿಯ ಇತರ ಪ್ರತಿವಾದಿಗಳಾಗಿ ಮಾಡಲಾಗಿದೆ.

ಇದನ್ನೂ ಓದಿ:ಜೀವ ಅಪಾಯದಲ್ಲಿದೆ… ವೈದ್ಯಕೀಯ ನೆರವು ನೀಡಿ : ಲಂಕಾ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದ

Advertisement

ಔರಂಗಾಬಾದ್‌ ನ ನಿವಾಸಿ ದಿಲೀಪ್ ಲುನಾವತ್ ಅವರು ತಮ್ಮ ಮಗಳು ಧಾಮಂಗಾವ್‌ನಲ್ಲಿರುವ ಎಸ್‌ಎಂಬಿಟಿ ದಂತ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆ ಮತ್ತು ಹಿರಿಯ ಉಪನ್ಯಾಸಕಿಯಾಗಿದ್ದಾಳೆ. ಸಂಸ್ಥೆಯಲ್ಲಿನ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಲಸಿಕೆಯಿಂದ ದೇಹಕ್ಕೆ ಯಾವುದೇ ಅಪಾಯವಿಲ್ಲ ಎಂದು ಮಗಳಿಗೆ ಭರವಸೆ ನೀಡಲಾಗಿತ್ತು. ಡಾ ಸೋಮಾನಿ ಮತ್ತು ಗುಲೇರಿಯಾ ಅವರು ಹಲವಾರು ಸಂದರ್ಶನಗಳಲ್ಲಿ ‘ಲಸಿಕೆಗಳು ಸುರಕ್ಷಿತವಾಗಿವೆ ಎಂದು ಜನರಿಗೆ ಭರವಸೆ ನೀಡಿದ್ದಾರೆ’ ಎಂದು ಲುನಾವತ್ ತಮ್ಮ ಮನವಿಯಲ್ಲಿ ಕೋರ್ಟ್ ಗೆ ಹೇಳಿದ್ದಾರೆ.

ಅವರು ತಮ್ಮ ಮಗಳು 2021 ಜನವರಿ 28ರಂದು ಪಡೆದ ಲಸಿಕೆಯ ಪ್ರಮಾಣಪತ್ರವನ್ನು ಕೋರ್ಟ್ ಗೆ ನೀಡಿದ್ದಾರೆ. ಅವರು  2021ರ ಮಾರ್ಚ್ 1 ರಂದು “ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳಿಂದ” ನಿಧನರಾದರು ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ ಈ ಘಟನೆಯನ್ನು ಅಕ್ಟೋಬರ್ 2, 2021 ರಂದು ಕೇಂದ್ರ ಸರ್ಕಾರದ ತಯಾರಿಸಿದ ಲಸಿಕಾಕರಣದ ಅಡ್ಡಪರಿಣಾಮಗಳ ವರದಿಯಲ್ಲಿ ಸೇರಿಸಲಾಗಿದೆ ಎಂದೂ ಅರ್ಜಿದಾರ ಲುನಾವತ್ ಅವರು ಕೋರ್ಟ್ ಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next