ಮುಂಬೈ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ರದ್ದು ಪಡಿಸಿದೆ. ಜತೆಗೆ ಆತನನ್ನು ದೋಷಮುಕ್ತಿಗೊಳಿಸಿ ಆದೇಶ ನೀಡಿದೆ.
ನ್ಯಾ.ಸಾಧನಾ ಜಾಧವ್ ಮತ್ತು ನ್ಯಾ.ಪೃಥ್ವಿರಾಜ್ ಚೌಹಾಣ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ನ.25ರಂದು ನೀಡಿದ್ದ ಆದೇಶದಲ್ಲಿ ಈ ಅಂಶ ಪುಷ್ಟೀಕರಿಸಿದೆ.
2012ರಲ್ಲಿ ನಡೆದಿತ್ತು ಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಆ ಪೈಕಿ ಒಬ್ಟಾಕೆಯನ್ನು ಕೊಲೆ ಮಾಡಲಾಗಿತ್ತು.
ಇದನ್ನೂ ಓದಿ:ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿಕೊಂಡಿದ್ದ ಥಾಣೆ ಜಿಲ್ಲಾ ಪೊಲೀಸರು ರಹೀಮುದ್ದೀನ್ ಶೇಖ್ ಎಂಬಾತನನ್ನು ಬಂಧಿಸಿದ್ದರು. ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ನಡೆದ ಸಂದರ್ಭದಲ್ಲಿ ಆತನಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಪೀಠ ಪ್ರಾಸಿಕ್ಯೂಷನ್ ಆರೋಪ ಸಾಬೀತುಪಡಿಸಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.
ಹೀಗಾಗಿ, ಕೂಡಲೇ ಆತನನ್ನು ಜೈಲಿಂದ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.