ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ (ಆಗಸ್ಟ್ 16) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಐದು ದಶಕಗಳಿಂದ ಪಂಪಾಸರೋವರದ ಅರ್ಚಕರಾಗಿದ್ದ ರಾಮಾದಾಸ ಬಾಬಾ ವಿಧಿವಶ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 379.43 ಅಂಕಗಳಷ್ಟು ಏರಿಕೆಯೊಂದಿಗೆ 59,842.21 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 127.10 ಅಂಕಗಳಷ್ಟು ಏರಿಕೆಯಾಗಿದ್ದು, 17,825.30 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಎಚ್ ಡಿಎಫ್ ಸಿ ಲೈಫ್, ಅದಾನಿ ಪೋರ್ಟ್ಸ್, ಈಚರ್ ಮೋಟಾರ್ಸ್, ಬಿಪಿಸಿಎಲ್ ಮತ್ತು ಮಾರುತಿ ಸುಜುಕಿ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಗ್ರಾಸಿಮ್ ಇಂಡಸ್ಟ್ರೀಸ್, ಹಿಂಡಲ್ಕೋ ಇಂಡಸ್ಟ್ರೀಸ್, ಎಸ್ ಬಿಐ, ಭಾರ್ತಿ ಏರ್ ಟೆಲ್ ಮತ್ತು ಜೆಎಸ್ ಡಬ್ಲ್ಯು ಸ್ಟೀಲ್ ಷೇರುಗಳು ನಷ್ಟ ಕಂಡಿದೆ.
ಆರ್ಥಿಕ ಸ್ಥಿತಿಗತಿಯ ಅಂಕಿಅಂಶ ಪ್ರಕಟವಾದ ನಂತರ ಚೀನಾ ಸೆಂಟ್ರಲ್ ಬ್ಯಾಂಕ್ ಅಚ್ಚರಿ ಎಂಬಂತೆ ಬಡ್ಡಿದರವನ್ನು ಇಳಿಕೆ ಮಾಡಿರುವುದು ಜಾಗತಿಕ ಷೇರುಪೇಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.