Advertisement

ಯೋಗಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಜತೆಯಾಗಿ ಹೊರಟ ಬೊಮ್ಮಾಯಿ- ಸಾವಂತ್

10:41 AM Mar 25, 2022 | Team Udayavani |

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಯೋಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಪರಸ್ಪರ ಶುಭ ಕೋರಿದರು.

ಇದನ್ನೂ ಓದಿ:ಇಂದು ಯೋಗಿ ಪಟ್ಟಾಭಿಷೇಕ

ಇಂದು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಭಾಗವಹಿಸಲು ಇಬ್ಬರೂ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಲಖನೌಗೆ ತೆರಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next