Advertisement

ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ನಳಿನ್‌ಕುಮಾರ್‌ ಕಟೀಲ್‌

08:31 PM May 03, 2022 | Team Udayavani |

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ತಂಡ ಸ್ಫೂರ್ತಿಯೊಂದಿಗೆ ಎದುರಿಸಿ 150 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ತಿಳಿಸಿದರು.

Advertisement

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದೊಳಗೆ ಅಥವಾ ಸರಕಾರದಲ್ಲಿ ನಾಯಕತ್ವದ ಗೊಂದಲ ಇಲ್ಲ. ನಾಯಕತ್ವ ಬದಲಾವಣೆ ಕುರಿತು ಯಾರಿಗಾದರೂ ಭ್ರಮೆ ಇದ್ದರೆ ಅದನ್ನು ಬಿಟ್ಟು ಬಿಡುವುದು ಒಳ್ಳೆಯದು ಎಂದರು.

ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ನಿಮಗೆ ಭಾರೀ ಅತುರ ಇದ್ದರೆ ತೆಗೆದುಬಿಡಿ ಎಂದು ನಗುತ್ತಲೇ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next