ಹೊಸಪೇಟೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆಯನ್ನು ಎದುರಿ ಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಸ್ಪಷ್ಟಪಡಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹಮಂತ್ರಿ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗುವುದಿಲ್ಲ ಎಂದರು.
ಸಮಾಜದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳು ಅಲ್ಲಲ್ಲಿ ಕಂಡು ಬರುತ್ತಿದೆ. ಎಲ್ಲವನ್ನೂ ಸರಿಪಡಿಸಲಾಗುವುದು ಎಂದರು.
ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಕೋಮುಗಲಭೆ, ಭಯೋತ್ಪಾದನೆ, ನಕ್ಸಲ್ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಭ್ರಷ್ಟಾಚಾರ, ಹಗರಣರಹಿತ ಆಡಳಿತ ನೀಡಲಾಗುತ್ತಿದೆ ಎಂದರು.
ಪಿಎಸ್ಐ ಪರೀಕ್ಷಾ ಅಕ್ರಮದ ಆರೋಪಿಗಳನ್ನು ಬಂಧಿಸಲಾಗಿದೆ. ಬಿಜೆಪಿ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ದಿವ್ಯಾ ಹಾಗರಗಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಗಿದ್ದದು ನಿಜ. ಆದರೆ, ಯಾರನ್ನೂ ಬಿಜೆಪಿ ರಕ್ಷಿಸುವುದಿಲ್ಲ. ಕಾಂಗ್ರೆಸ್ನವರ ಆಡಳಿತದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಯಾವುದರ ಕುರಿತೂ ಕಾಂಗ್ರೆಸ್ ತನಿಖೆ ಮಾಡಿಲ್ಲ. ಆದರೆ ಬಿಜೆಪಿ ಆಡಳಿತದಲ್ಲಿ ದೂರುಗಳು ಕೇಳಿ ಬಂದ ತತ್ಕ್ಷಣವೇ ತನಿಖೆ ನಡೆಸಲಾಗಿದೆ ಎಂದರು.
ಪ್ರಧಾನಿಗೆ ನಿವೃತ್ತ ಅಧಿ ಕಾರಿಗಳು ಪತ್ರ ಬರೆದಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪತ್ರ ರಾಜಕೀಯ ಪ್ರೇರಿತ ಎಂದು ನಿವೃತ್ತ ಅಧಿಕಾರಿಗಳೇ ಮತ್ತೂಂದು ಪತ್ರ ಬರೆದಿದ್ದಾರೆ ಎಂದರು.