Advertisement

ಬೊಮ್ಮಾಯಿಗೆ ಹಳೆಯ ಮಂತ್ರಿಮಂಡಲ: ಎಚ್‌ಡಿಕೆ ಟೀಕೆ

09:19 PM Aug 09, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬದಲಾದರೆ ಸಾಲದು, ಅವರ ಸಂಪುಟದಲ್ಲಿರುವ ಸಚಿವರೂ ಹೊಸ ಮುಖ್ಯಮಂತ್ರಿಗಳಂತೆಯೇ ನಡೆದುಕೊಳ್ಳುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಹೊಸ ಸಚಿವ ನಡವಳಿಕೆಯನ್ನು ಟ್ವೀಟ್‌ ಮೂಲಕ ಟೀಕಿಸಿರುವ ಅವರು, “ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನು ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬಸವರಾಜ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆಯ ಸಚಿವರು ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿ, ತಮ್ಮ ಹಳೆಯ ಚಾಳಿ ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಮತ್ತು ಸನ್ಮಾನಗಳು ಆಗಬೇಕು’ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆ ಬಾಗಿಲು ಬಳಿಯೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲು ಅಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಿರಲಿ ಎಂದು ಸೂಚ್ಯವಾಗಿ ಚುಚ್ಚಿದ್ದಾರೆ.

ಇದನ್ನೂ ಓದಿ:‘ನೀರಜ್’ಹೆಸರಿನವರಿಗೆ ಫ್ರೀ ಪೆಟ್ರೋಲ್: ಚೋಪ್ರಾ ಚಿನ್ನದ ಸಾಧನೆಗೆ ಬಂಕ್ ಮಾಲೀಕನ ಸಂಭ್ರಮ

ಹೊಸ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ ಮತ್ತು ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next