ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ವಿಚಾರ ಕೇವಲ ಕೇವಲ ಉಹಾಪೋಹ. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೊಟ್ಟ ಭರವಸೆಯನ್ನು ಬೊಮ್ಮಾಯಿ ಸರಕಾರ ಈಡೇರಿಸಿದೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ನಾವು ನಿಶ್ಚಿತವಾಗಿ 140 ಸ್ಥಾನ ಗೆಲುತ್ತೇವೆ. ಏಪ್ರಿಲ್ ಒಂದನೇ ತಾರೀಖಿನ ನಂತರ ಮೂರು ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದರು.
ಅವಧಿಗೂ ಮುನ್ನ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ ವೈ, ಅವಧಿ ಪೂರ್ವ ಚುನಾವಣೆಯಾಗುವ ಲಕ್ಷಣ ಈಗ ಇಲ್ಲ. ಆದರೆ, ಅಮಿತ್ ಶಾ ರಾಜ್ಯಕ್ಕೆ ಬಂದ ನಂತರ ಆ ರೀತಿಯ ಸುದ್ದಿ ಇದ್ದರೆ ತಿಳಿಸುತ್ತೇನೆ ಎಂದರು.
ಇದನ್ನೂ ಓದಿ:ರಾಷ್ಟ್ರೀಯ ಪಕ್ಷಗಳ ವಿರುದ್ಧ ನಮ್ಮ ಹೋರಾಟ; ಚುನಾವಣೆಗೆ ನಾವೂ ಸಿದ್ದ: ಕುಮಾರಸ್ವಾಮಿ
ವಿಜಯೇಂದ್ರ ಸಂಪುಟ ಸೇರುವ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ವೈ.ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ನಾನು ಯಾರ ಜೊತೆಯೂ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.