Advertisement
ಫೆ. 14ರಂದು ಬೆಳಗ್ಗೆ ಗಣಪತಿ ಹವನ, ಮೇಳದ ದೇವರ ಆಗಮನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ಮೇಳಕ್ಕೆ ಸಮರ್ಪಣೆಗೊಳ್ಳಲಿರುವ 2 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಯುಧಗಳ ಮೆರವಣಿಗೆ, ಚೌಕಿ ಪೂಜೆ, “ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಬಯಲಾಟ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ವೇ|ಮೂ| ಲಕ್ಷ್ಮೀನಾರಾಯಣ ಆಸ್ರಣ್ಣ ಶುಭಾಶಂಸನೆ, ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
Related Articles
Advertisement
ಮುಖ್ಯ ಅತಿಥಿಗಳಾಗಿ ವಿಧಾನಸಭಾ ಧ್ಯಕ್ಷ ಯು.ಟಿ. ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ನರಿಕೊಂಬು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಾಲ್ ಭಾಗವಹಿಸಲಿದ್ದಾರೆ.
ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಹಾಗೂ ಸಾಲಿಗ್ರಾಮ ಮೇಳದ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರನ್ನು ಸಮ್ಮಾನಿಸಲಾಗುವುದು. ಕಟೀಲು ಮೇಳದ ಕಲಾವಿದ ಮೋಹನ ಕುಮಾರ್ ಅಮ್ಮುಂಜೆ ಅವರಿಗೆ ಬೊಂಡಾಲ ಪ್ರಶಸ್ತಿ- 2024 ಪ್ರದಾನ ಮಾಡಲಾಗುವುದು. ಫೆ. 16ರಂದು ಸಂಜೆ ಮೇಳದ ದೇವರ ಮೆರವಣಿಗೆ, “ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದರು.
ಸಮಿತಿಯ ಪ್ರಮುಖರಾದ ಬಿ. ಸೀತಾರಾಮ ಶೆಟ್ಟಿ ಮಂಗಳೂರು, ಪದ್ಮನಾಭ ಮಯ್ಯ ಏಲಬೆ, ಪ್ರೊ| ಭಾಸ್ಕರ ರೈ ಕುಕ್ಕುವಳ್ಳಿ, ಸುನಾದರಾಜ್ ಶೆಟ್ಟಿ ಬೊಂಡಾಲ ಅಂತರಗುತ್ತು ಪತ್ರಿಕಾ ಗೋಷ್ಠಿಯಲ್ಲಿದ್ದರು.