Advertisement
ದಸರಾ ಹಬ್ಬವನ್ನು ತುಂಬಾ ಉತ್ಸಾಹದಿಂದ ವಿಜೃಂಭಣೆಯಿಂದ ಆಚರಿಸುತ್ತಾರೆ.
Related Articles
Advertisement
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ. ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತಣ್ತೀದ ಲಾಭವಾಗುತ್ತದೆ. ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ್ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ್ ಋತುವಿನಲ್ಲಿ ದೇವರಾತ್ರಿಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ರಾತ್ರಿಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ. ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ; ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತಯಿರುವುದಿಲ್ಲ. ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸಣ್ತೀಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ. ಹಾಗಾದರೆ ಬನ್ನಿ, ನಾವು ಈ ದಸರಾ ಹಬ್ಬದ ಆಧ್ಯಾತ್ಮಿಕ ಹಿನ್ನೆಲೆಯನ್ನು ತಿಳಿದು, ಪರಸ್ಪರರಲ್ಲಿ ಸ್ನೇಹ ಆತ್ಮೀಯತೆಯನ್ನು ಬೆಳೆಸಿ, ಈ ಸಂಭ್ರಮದ ಹಬ್ಬವನ್ನು ಬಾಂಧವ್ಯದ ಬಂಧನದಿಂದ ವಿಶ್ವಶಾಂತಿಯ ಉಗಮಕ್ಕೆ ನಾಂದಿಯನ್ನು ಹಾಡಿ ಉತ್ಸಾಹದಿಂದ ಆಚರಿಸೋಣ.
- ಸಂಪೂ ಕಿಚಡಿ
ಕಲಘಟಗಿ ತಾಲೂಕು ಧಾರವಾಡ ಜಿಲ್ಲೆ