ಕುಂದಾಪುರ: ಪುಸ್ತಕವು ಜ್ಞಾನದ ಸಂಕೇತ. ಭಾರತೀಯ ಸಂಸ್ಕೃತಿಯಲ್ಲಿ ಪುಸ್ತಕಗಳಿಗೆ ಅತ್ಯಂತ ವಿಶೇಷ ಸ್ಥಾನವಿದೆ. ಸಂಸ್ಕೃತಿ, ಧರ್ಮ ಮತ್ತು ಜ್ಞಾನ ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತರವಾಗಲು ಮುಖ್ಯ ಕಾರಣ ಪುಸ್ತಕ. ಪುಸ್ತಕ ಸಂಸ್ಕೃತಿ ರೂಢಿಯಾಗಲಿ. ಅದಕ್ಕೆ ಈ ಕಾರ್ಯಕ್ರಮವು ನಾಂದಿಯಾಗಲಿ ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಡಾ| ಎಚ್. ವಿ. ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.
ಅವರು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ನಡೆದ ಪುಸ್ತಕ ಹಸ್ತಾಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬಾಪೂಜಿ ವಿದ್ಯಾಸಂಸ್ಥೆ ದಾವಣಗೆರೆಯ ನಿವೃತ್ತ ಸಂಸ್ಕೃತ ಉಪನ್ಯಾಸಕ ಡಾ| ಎನ್. ಕೆ. ರಾಮಚಂದ್ರ ಪ್ರಾಂಶುಪಾಲ ಅವರಿಗೆ ಪುಸ್ತಕ ಹಸ್ತಾಂತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ| ಎನ್. ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.
ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ| ಯಶವಂತಿ ಕೆ. ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ಸುವರ್ಣ ವಂದಿಸಿದರು. ವಿದ್ಯಾರ್ಥಿನಿ ಶ್ರೀ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.