Advertisement

ಮೈಸೂರಲ್ಲಿ ಪುಸ್ತಕ ಮಾರಾಟ ಮೇಳ

11:12 PM Sep 17, 2019 | Lakshmi GovindaRaju |

ಮಂಗಳೂರು: ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಸೆ. 29ರಿಂದ ಅ. 7ರ ವರೆಗೆ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 2,000 ರೂ. ಭದ್ರತಾ ಠೇವಣಿ ಡಿಡಿಯನ್ನು ಆಡಳಿತ ಅಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹೆಸರಿನಲ್ಲಿ ಸಲ್ಲಿಸಬೇಕು.

Advertisement

ಆಸಕ್ತ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಗಳಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗಳಿಂದ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ www.kannadapustakapradhikara.comನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಡಿಡಿಯೊಂದಿಗೆ ಸೆ. 21ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾ ಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇಮೇಲ್‌ kannadappradhikara@gmail.com ಮೂಲಕ ಸಲ್ಲಿಸಬೇಕು.

Advertisement

Udayavani is now on Telegram. Click here to join our channel and stay updated with the latest news.

Next