Advertisement

ಎಲ್ಲಾ ಕೋಟೆಗಳ ಚಿತ್ರ ಕೃತಿಯಲ್ಲಿ ದಾಖಲೆ

01:13 PM Sep 07, 2020 | Suhan S |

ಮೈಸೂರು: ರಾಜ್ಯದ ಪ್ರತಿಯೊಂದು ಕೋಟೆಗಳ ಚಿತ್ರಗಳನ್ನು ಅತ್ಯಂತ ಸೃಜನಶೀಲತೆಯಿಂದ ಸೆರೆಹಿಡಿದು “ಗೋಲ್ಡನ್‌ ವೀವ್ಸ್‌ ಆಫ್ ಕರ್ನಾಟಕ ಫೋರ್ಟ್ಸ್’ ಪುಸ್ತಕದಲ್ಲಿ ದಾಖಲಿಸಿರುವುದು ಉತ್ತಮವಾದ ಕೆಲಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

Advertisement

ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಛಾಯಾ ಗ್ರಾಹಕ ವಿಶ್ವನಾಥ್‌ ಸುವರ್ಣ ಅವರು ಸೆರೆ ಹಿಡಿದ ಕೋಟೆ ಚಿತ್ರಗಳ ಸಂಗ್ರಹವಾದ “ಗೋಲ್ಡನ್‌ ವೀವ್ಸ್‌ ಆಫ್ ಕರ್ನಾಟಕ ಫೋರ್ಟ್ಸ್’ ಪುಸ್ತಕ ಬಿಡುಗಡೆಗೊಳಿಸಿ ಮಾತ ನಾಡಿದ ಅವರು, ಬೀದರ್‌ನಿಂದ ಕಾಸರ ಗೋಡಿನವರೆಗೂಅತ್ಯಂತ ವ್ಯವಸ್ಥಿತವಾಗಿ ಕೋಟೆಯ ಚಿತ್ರಗಳನ್ನು ಹೊಂದಿರುವ ಪುಸ್ತಕ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಛಾಯಾಗ್ರಾಹಕ ವಿಶ್ವನಾಥ್‌ ಸುವರ್ಣ ಅವರು ಬಹಳ ಶ್ರಮವಹಿಸಿ ರಾಜ್ಯಾದ್ಯಂತ ಪ್ರವಾಸ ಮಾಡಿ ಕೋಟೆಗಳ ಚಿತ್ರಗಳನ್ನು ತೆಗೆದು, ಅದಕ್ಕೆ ಪುಸ್ತಕ ರೂಪ ನೀಡಿರುವುದು ಪ್ರಶಂಸನೀಯ. ಈ ಪುಸ್ತಕಗಳನ್ನು ನಾನು ಹೆಚ್ಚು ಖರೀದಿಸಿ, ಅವರಿಗೆ ಪ್ರೋತ್ಸಾಹಿಸುತ್ತೇನೆ ಎಂದು ತಿಳಿಸಿದರು.

ಅಪರೂಪದ ಚಿತ್ರಗಳು: ಆನ್‌ಲೈನ್‌ನಲ್ಲಿಮೂಲಕ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ವಿಶ್ವನಾಥ್‌ ಸುವರ್ಣ ಅವರು ತಮ್ಮ ವಿಶೇಷ ಕೈಚಳದಿಂದ ಪ್ರತಿಯೊಂದು ಚಿತ್ರಗಳನ್ನು ಸೆರೆಹಿಡಿದು ಪುಸ್ತಕದಲ್ಲಿ ದಾಖಲಿಸಿದ್ದಾರೆ. ಇಂತಹ ಚಿತ್ರಗಳನ್ನು ಕಾಣುವುದು ಅಪರೂಪ ಎಂದರು.

ಯಾವುದೇ ಚಿತ್ರವನ್ನು ತೆಗೆಯಲು ಬಹಳ ಸಂಯಮ, ಶಾಂತಿ ಮತ್ತು ಶಿಸ್ತು ಅವಶ್ಯಕ. ಈ ಅಂಶಗಳನ್ನು ಗಮನದಲ್ಲಿರಿಸಿ ಚಿತ್ರಗಳನ್ನು ಸೆರೆಹಿಡಿದರೆ ಅತ್ಯಂತ ಪರಿಣಾಕಾರಿ ಆಗಿರು ತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಎಚ್‌.ವಿ. ರಾಜೀವ್‌, ಪತ್ರಕರ್ತ ರವೀಂದ್ರ ಭಟ್ಟ, ಛಾಯಾಗ್ರಾಹಕ ವಿಶ್ವನಾಥ್‌ ಸುವರ್ಣ, ಕರ್ನಾಟಕ ಕಾವಲು ಪಡೆಯ ಅಧ್ಯಕ್ಷ ಎಂ. ಮೋಹನ್‌ ಕುಮಾರ್‌ ಗೌಡ, ಛಾಯಾಗ್ರಾಹಕ ಎಸ್‌.ಆರ್‌.ಮಧುಸೂದನ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next