Advertisement
ಬಸ್ ನಿಲ್ದಾಣ, ಅಂಚೆ ಕಚೇರಿ, ಗ್ರಾ.ಪಂ. ಕಚೇರಿ, ಸಾರ್ವಜನಿಕ ಉದ್ಯಾನ, ಮಾರುಕಟ್ಟೆ ಪ್ರದೇಶಗಳಲ್ಲಿ ಗೂಡು ನಿರ್ಮಿಸಿ ಪುಸ್ತಕಗಳನ್ನು ಇಟ್ಟು ಜನರಿಗೆ ಸುಲಭವಾಗಿ ಓದಲು ನೆರವಾಗುವ ಪರಿಕಲ್ಪನೆಯೇ ಪುಸ್ತಕ ಗೂಡು. ದ.ಕ. ಜಿಲ್ಲಾ ಪಂಚಾಯತ್ ಸಿಇಒ ಡಾ| ಕುಮಾರ್ ಅವರ ಕನಸಿನಂತೆ ಈ ಯೋಜನೆಯನ್ನು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಅನುಷ್ಠಾನಿಸಲು ಉದ್ದೇಶಿಸಲಾಗಿದೆ.
Related Articles
Advertisement
ಎಲ್ಲ ಪುಸ್ತಕ ಗೂಡುಗಳಿಗೆ ತಗಲುವ ವೆಚ್ಚವನ್ನು ಆಯಾ ಗ್ರಾ.ಪಂ. ಮಾಡಲಿದೆ. ಪುಸ್ತಕಗಳನ್ನು ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರು ನೀಡುತ್ತಾರೆ. ಪ್ರತೀ ಗೂಡಲ್ಲಿ ಕನಿಷ್ಠ 30 ಪುಸ್ತಕಗಳನ್ನಿರಿಸುವ ಗುರಿ ಇದೆ.
ಆಯ್ಕೆಯಾದ ಗ್ರಾಮಗಳು :
ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಕೊಣಾಜೆ, ಬೆಳ್ಮ, ಬೆಳ್ತಂಗಡಿ ತಾಲೂಕಿನ ಅಳದಂಗಡಿ, ಬಂಟ್ವಾಳ ತಾಲೂಕಿನ ಕೊಳ್ನಾಡು, ಚೆನ್ನೈತ್ತೋಡಿ, ಅರಳ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಬಕ, ಆರ್ಯಾಪು, ಕಡಬ ತಾಲೂಕಿನ ಸುಬ್ರಹ್ಮಣ್ಯ, ಅಲಂಕಾರು, ರಾಮಕುಂಜ, ಸುಳ್ಯ ತಾಲೂಕಿನ ಬೆಳ್ಳಾರೆ, ಮೂಡಬಿದಿರೆ ತಾಲೂಕಿನ ಶಿರ್ತಾಡಿ, ತೆಂಕಮಿಜಾರು, ಪುತ್ತಿಗೆ.
ಗ್ರಾಮೀಣ ಜನರಲ್ಲಿ ಪುಸ್ತಕ ಪ್ರೀತಿ ಬೆಳೆಯಬೇಕು ಎಂಬ ಸದುದ್ದೇಶದಿಂದ “ಪುಸ್ತಕ ಗೂಡು’ ಕಲ್ಪನೆಯನ್ನು ರಾಜ್ಯದಲ್ಲೇ ಮೊದಲ ಬಾರಿ ದ.ಕ. ಜಿಲ್ಲೆಯಲ್ಲಿ ಅನುಷ್ಠಾನಿಸಲಾಗಿದೆ. ಸದ್ಯ ಕೆಲವು ಗ್ರಾಮ ವ್ಯಾಪ್ತಿಯಲ್ಲಿ ಇದು ಜಾರಿಯಾಗಿ ಬಳಿಕ ಎಲ್ಲಾ ಗ್ರಾಮಗಳಿಗೆ ವಿಸ್ತರಿಸಲಾಗುವುದು.– ಡಾ| ಕುಮಾರ್, ದ.ಕ. ಜಿ.ಪಂ. ಸಿಇಒ
-ದಿನೇಶ್ ಇರಾ