ಕಾಪು : ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜ. 10 ರಂದು ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೂಸ್ಟರ್ ಡೋಸ್ ವಿತರಣಾ ಕಾರ್ಯಕ್ರಮ ನಡೆಯಿತು.
ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಆರೋಗ್ಯ ಸಮಸ್ಯೆ ಯವರಿಗೆ ಮುನ್ನೆಚ್ಚರಿಕೆ ಡೋಸ್ ವಿತರಣೆಗೆ ಚಾಲನೆ ನೀಡಿದ ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಮಾತನಾಡಿ, ಮೂರನೇ ಅಲೆ ತಡೆಗಟ್ಟುವಲ್ಲಿ ಲಸಿಕೆ ಒಂದು ವರದಾನವಾಗಿದೆ. ಲಸಿಕೆ ಪಡೆದುಕೊಂಡು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಕರೆ ನೀಡಿದರು.
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್ ಮಾತನಾಡಿ, ಕೋವಿಡ್ ಮೂರನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಮೊದಲು ಯಾವ ಲಸಿಕೆ ಪಡೆಯಲಾಗಿತ್ತೋ, ಅದೇ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ನಿರ್ಮಲ, ಆರೋಗ್ಯ ಸುರಕ್ಷತಾಧಿಕಾರಿ ಶಕುಂತಲಾ,ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಿರಿಯ ನಾಗರಿಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಇದನ್ನೂ ಓದಿ : ಕೊರೊನಾ ಸೋಂಕು ಏರಿಕೆ: ಬೆಳಗಾವಿ ಜಿಲ್ಲೆಯ ಶಾಲೆಗಳಿಗೆ ಒಂದು ವಾರ ರಜೆ