Advertisement

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

08:59 PM Jan 22, 2022 | Team Udayavani |

ನವದೆಹಲಿ: ಮುನ್ನೆಚ್ಚರಿಕಾ ಡೋಸ್‌ ಸೇರಿದಂತೆ ಕೊರೊನಾ ಲಸಿಕೆ ಪಡೆಯಲು ಮುಂದಾಗಿರುವವರಿಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಯೊಂದನ್ನು ಹೊರಡಿಸಿದೆ.

Advertisement

ನಿಮಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಸಂಪೂರ್ಣ ಗುಣಮುಖರಾದ 3 ತಿಂಗಳ ಬಳಿಕವೇ ಕೋವಿಡ್‌ ಲಸಿಕೆಯನ್ನು (ಮುನ್ನೆಚ್ಚರಿಕೆ ಡೋಸ್‌ ಸೇರಿದಂತೆ) ಪಡೆಯಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಆರೋಗ್ಯ ಯೋಜನೆ (ಎನ್‌ಎಚ್‌ಎಂ) ಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಯೋಜನಾ ನಿರ್ದೇಶಕರಾದ ವಿಕಾಸ್‌ ಶೀಲ್‌ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ.

ಮುನ್ನೆಚ್ಚರಿಕಾ ಡೋಸ್‌ಗೆ ಅರ್ಹರಾಗಿರುವ ಫ‌ಲಾನುಭವಿಗಳಿಗೆ ಕೊರೊನಾ ಸೋಂಕು ತಗುಲಿದ್ದರೆ, ಲಸಿಕೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಕಾಸ್‌ ಶೀಲ್‌ ಅವರು ಪತ್ರ ಮುಖೇನ ಸ್ಪಷ್ಟನೆ ನೀಡಿದ್ದು, ಸೋಂಕು ತಗುಲಿದವರು 3 ತಿಂಗಳ ನಂತರ ಲಸಿಕೆ ಪಡೆಯುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

Advertisement

237 ದಿನಗಳಿಗೆ ಗರಿಷ್ಠ:
ದೇಶದಲ್ಲಿ ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ 3,37,704 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 488 ಮಂದಿ ಅಸುನೀಗಿದ್ದಾರೆ. ದೇಶದಲ್ಲಿ 237 ದಿನಗಳಿಗೆ ಹೋಲಿಕೆ ಮಾಡಿದರೆ, 21,13,365ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.93.31 ಆಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next