Advertisement

ಕರಾವಳಿಯಲ್ಲಿ ಇಂದಿನಿಂದ ಕೋವಿಡ್ ಮುನ್ನೆಚ್ಚರಿಕೆ ಲಸಿಕೆ

02:20 AM Jan 10, 2022 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜ.10ರಿಂದ ಕೊರೊನಾ ಮುನ್ನೆಚ್ಚರಿಕೆ ಲಸಿಕೆ ನೀಡುವ ಕಾರ್ಯ ಆರಂಭಗೊಳ್ಳಲಿದೆ. ದ.ಕ.ದಲ್ಲಿ 3,37,447 ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ.

Advertisement

ಈಗಾಗಲೇ 2ನೇ ಡೋಸ್‌ ಪಡೆದು 9 ತಿಂಗಳು (39 ವಾರ) ಪೂರೈಸಿದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಈ ಲಸಿಕೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ 52,523 ಆರೋಗ್ಯ ಕಾರ್ಯಕರ್ತರು, 15,924 ಮುಂಚೂಣಿ ಕಾರ್ಯಕರ್ತರು, ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ 2,69,000 ಮಂದಿ ಫಲಾನುಭವಿಗಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 23,125 ಆರೋಗ್ಯ ಕಾರ್ಯಕರ್ತರನ್ನು ಹಾಗೂ 7,311 ಮುಂಚೂಣಿ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಜತೆಗೆ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.

1,258 ಮಂದಿಗೆ ಲಸಿಕೆ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರವಿವಾರ ಒಟ್ಟು 1,258 ಮಂದಿಗೆ ಲಸಿಕೆ ಹಾಕಲಾಗಿದೆ. ದ.ಕ. ಜಿಲ್ಲೆಯಲ್ಲಿ 1191 ಮಂದಿಗೆ ಲಸಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ರವಿವಾರ ಒಟ್ಟು 67 ಮಂದಿಗೆ ಲಸಿಕೆ ಹಾಕಲಾಗಿದ್ದು 20 ಮಂದಿ ಮೊದಲ ಹಾಗೂ 47 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next