Advertisement
ಲಸಿಕಾಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಶೇ.100 ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್ ಲಸಿಕೆ ನೀಡಿದೆ. 3ನೇ ಡೋಸ್ ಕೂಡ ಮುಂದಿನ 75 ದಿನಗಳಲ್ಲಿ ನೀಡಲಿದೆ ಎಂದು ಹೇಳಿದರು.
Related Articles
Advertisement
ಶೀಘ್ರದಲ್ಲಿ ರಾಜ್ಯದಲ್ಲಿ 470 ಕಡೆಗಳಲ್ಲಿ ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಮುಂದಿನ ಮೂರು ತಿಂಗಳ ಒಳಗೆ ಈ ಕ್ಲಿನಿಕ್‌ಗಳು ಆರಂಭವಾಗಲಿವೆ.
ರಾಜಧಾನಿ ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್ ಆರಂಭವಾಗಲಿದ್ದು ಜುಲೈ 28ಕ್ಕೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಮೊದಲ ಕ್ಲಿನಿಕ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಜತೆ ಜಾಗೃತಿಯೂ ಅವಶ್ಯಕ: ಡಾ.ಕೆ.ಸುಧಾಕರ್
ಎಚ್ಚರಿಕೆಮಂಕಿಫಾಕ್ಸ್ ಕುರಿತಂತೆ ರಾಜ್ಯಾದ್ಯಂತ ಕಟ್ಟೆಚ್ಚರವಹಿಸಲಾಗಿದೆ . ಆರು ತಿಂಗಳ ಹಿಂದೆಯೇ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮುನ್ನೇಚ್ಚರಿಕೆ ಮಾರ್ಗಸೂಚಿ ಹೊರಡಿಸಲಾಗಿತ್ತು. ವಿಮಾನನಿಲ್ದಾಣ, ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಕೇರಳದಲ್ಲಿ ಮೊನ್ನೆ ಒಂದು ಪ್ರಕರಣ ವರದಿಯಾಗಿದೆ. ಆ ನಂತರ ಗಡಿ ಭಾಗದಲ್ಲಿ ಮತ್ತು ಇತರೆ ಭಾಗಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಹೀಗಾಗಿ ಮಂಕಿಫಾಕ್ಸ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಮೊಟ್ಟೆ ಅಪೌಷ್ಟಿಕ ಎಂದು ವರದಿ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವೈಯಕ್ತಿಕವಾಗಿ ತಿಳಿದುಕೊಂಡಿರುವಂತೆ ಹಾಲು, ಮೊಟ್ಟೆ ಎಲ್ಲವೂ ಅತ್ಯಂತ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಎಂದು ಹೇಳಿದರು.