Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆಮನೆಯಲ್ಲಿ ಬಿಜೆಪಿ ಧ್ವಜ ಹಾರಿಸಲಾಗಿದೆ. ಪೇಜ್ ಪ್ರಮುಖರನ್ನು ನಿಯುಕ್ತಿ ಮಾಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಾಜಿನಗರದಲ್ಲಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಂಗಳೂರಿನಲ್ಲಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಬೂತ್ ವಿಜಯ ಅಭಿಯಾನ ಪ್ರಾರಂಭಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಗದಗದಲ್ಲಿ ಜರಗಿದ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಚಿವರು, ಸಂಸದರು, ಶಾಸಕರು ಸಹಿತ ಅಭಿಯಾನ ನಡೆಸಿದ್ದು, ಕಟ್ಟಕಡೆಯ ಕಾರ್ಯಕರ್ತರಲ್ಲಿ ಇದು ಸಂಚಲನ ಮೂಡಿಸಿದೆ. ಬೂತ್ ಗೆಲುವಿನ ಮೂಲಕ ರಾಜ್ಯದಲ್ಲಿ ಬಿಜೆಪಿ ಗೆಲುವು ಖಂಡಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಸಹ ಸಂಚಾಲಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಕೇಂದ್ರ ಸಚಿವ ಅಮಿತ್ ಶಾ ಅವರು ಬೂತ್ ಗೆಲುವಿನ ಮೂಲಕ ರಾಜ್ಯದಲ್ಲಿ ಗೆಲುವಿನ ಗುರಿ ನೀಡಿ¨ªಾರೆ. ಪಕ್ಷದ ಎಲ್ಲ ನಾಯಕರು ಒಂದು ಬೂತ್ ಗೆ ಹೋಗಿ ಅಲ್ಲಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರೂ ಇದರಲ್ಲಿ ಭಾಗವಹಿಸಿದ್ದು ವಿಶೇಷ. ಬೂತ್ ಅಭಿಯಾನ ಯಶಸ್ಸಿಗಾಗಿ 65,320 ಸಭೆಗಳನ್ನು ಮಾಡಿದ್ದೇವೆ. 615 ವೆಬೆಕ್ಸ್ ಸಭೆಗಳನ್ನೂ ನಡೆಸಲಾಗಿತ್ತು. ಈ ಮೂಲಕ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಳ್ಳುವಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು.