Advertisement

ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ: ಸಿಎಂ ಬೊಮ್ಮಾಯಿ

12:31 PM Dec 05, 2022 | Team Udayavani |

ಹುಬ್ಬಳ್ಳಿ: ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದು ಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು.

ಮತ್ತೊಮ್ಮೆ ಮಾತುಕತೆ: ಮಹಾರಾಷ್ಟ್ರ ಹಾಗೂ ಕರ್ನಾಟಕದ ಜನರ ಮಧ್ಯೆ ಸಾಮರಸ್ಯವಿದೆ. ಅದೇ ಸಂದರ್ಭದಲ್ಲಿ ಗಡಿ ವಿವಾದವೂ ಇದೆ. ಆದರೆ ಮಹಾರಾಷ್ಟ್ರ ಕ್ಯಾತೆ ತೆಗೆದು ಸುಪ್ರೀಂ ಕೋರ್ಟಿಗೆ ಹೋಗಿದ್ದಾರೆ. ಈಗಿನ ಸಂದರ್ಭದಲ್ಲಿ ಪ್ರವಾಸ ಮಾಡುವುದು ಪ್ರಚೋದನಕಾರಿ ಕೆಲಸ. ಜನರಲ್ಲಿ ಭಾವನೆಗಳನ್ನು ಕೆರಳಿಸುವ ಕೆಲಸವಾಗುತ್ತದೆ. ಮತ್ತೊಮ್ಮೆ ಮಹಾರಾಷ್ಟ್ರ ಮುಖ್ಯ ಮಂತ್ರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಇದನ್ನೂ ಓದಿ:ನಿನಗಿದು ಬೇಕಿತ್ತಾ ಮಗನೇ… ಕೋಲಿನಿಂದ ಹೊಡೆದವರನ್ನು ಅಟ್ಟಾಡಿಸಿಕೊಂಡು ಬಂದ ಆನೆ: ವಿಡಿಯೋ ವೈರಲ್

Advertisement

ಅಕಸ್ಮಾತ್ ಬರುವ ಸಾಹಸ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದರು. ಹಿಂದೆ ಇಂಥ ಸಂದರ್ಭಗಳಾದ ಸಂದರ್ಭದಲ್ಲಿ ಏನು ಕ್ರಮ ತೆಗೆದುಕೊಂಡಿದ್ದರೋ ಅದೇ ರೀತಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next