ಮುಂಬೈ: ಕ್ರಿಕೆಟಿಗರು ಮತ್ತು ಕ್ರೀಡಾಭಿಮಾನಿಗಳು ಐಪಿಎಲ್ ಮೂಡ್ ನಲ್ಲಿ ಇರುವಾಗಲೇ ಭಾರತ- ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಬಾರ್ಡರ್ – ಗಾವಸ್ಕರ್ ಟೆಸ್ಟ್ ಸರಣಿಯಲ್ಲಿ ಐದು ಪಂದ್ಯಗಳು ನಡೆಯಲಿದೆ.
ನವೆಂಬರ್ 22ರಿಂದ ಜನವರಿ 7ರವರೆಗೆ ಐದು ಪಂದ್ಯಗಳು ನಡೆಯಲಿದೆ. ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಪಂದ್ಯಗಳು ನಡೆಯಲಿದೆ. ಇದರಲ್ಲಿ ಅಡಿಲೇಡ್ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಆಗಿರಲಿದೆ.
1991/92 ರ ನಂತರ ಮೊದಲ ಬಾರಿಗೆ ಆಸ್ಟ್ರೇಲಿಯಾ ಮತ್ತು ಭಾರತವು ಬಾರ್ಡರ್-ಗಾವಸ್ಕರ್ ಟ್ರೋಫಿಯ ಭಾಗವಾಗಿ ಐದು ಪಂದ್ಯಗಳ ಸರಣಿಯನ್ನು ಆಡಲಿದೆ. ಇದು ಮುಂದಿನ ವರ್ಷದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಎರಡೂ ತಂಡಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ.
ಮಂಗಳವಾರ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದ ಮಹಿಳಾ ವೇಳಾಪಟ್ಟಿಯ ಭಾಗವಾಗಿ ಡಿಸೆಂಬರ್ ಆರಂಭದಲ್ಲಿ ಮೂರು ಏಕದಿನ ಪಂದ್ಯಗಳನ್ನು ನಡೆಸಲು ಯೋಜಿಸಲಾಗಿದೆ. ಪುರುಷರ ಕ್ರಿಕೆಟ್ ತಂಡದ ಪ್ರವಾಸದ ಸಮಯದಲ್ಲೇ ಭಾರತದ ವನಿತಾ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿರಲಿದೆ.
ವೇಳಾಪಟ್ಟಿ
ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್
ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಹಗಲು ರಾತ್ರಿ)
ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್
ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್
ಐದನೇ ಟೆಸ್ಟ್: ಜನವರಿ 3-7, ಸಿಡ್ನಿ
ಆಸ್ಟ್ರೇಲಿಯಾ – ಭಾರತ ವನಿತಾ ಸರಣಿ
ಮೊದಲ ಏಕದಿನ: ಡಿಸೆಂಬರ್ 5, ಬ್ರಿಸ್ಬೇನ್
ಎರಡನೇ ಏಕದಿನ: ಡಿಸೆಂಬರ್ 8, ಬ್ರಿಸ್ಬೇನ್
ಮೂರನೇ ಏಕದಿನ: ಡಿಸೆಂಬರ್ 11, ಪರ್ತ್