Advertisement
ಈ ಮಹಾವಿದ್ಯಾಲಯವು ನವದೆಹಲಿಯ ಅಖಿಲ ಭಾರತದ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದಿದೆ. ಹಾಗೂ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಲಗ್ನತೆ ಹೊಂದಿದ್ದು, ಮಹಾವಿದ್ಯಾಲಯದಲ್ಲಿ ಸಿವ್ಹಿಲ್ ಇಂಜನಿಯರಿಂಗ್, ಮೆಕ್ಯಾನಿಕಲ್ ಇಂಜನಿಯರಿಂಗ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸೇರಿದಂತೆ ಒಟ್ಟು ನಾಲ್ಕು ವಿಭಾಗಗಳಿದ್ದು, ಮಹಾ ವಿದ್ಯಾಲಯದಲ್ಲಿ ಕರ್ನಾಟಕ, ಮಹಾರಾಷ್ಟ್ರ ÷, ಝಾರ್ಕಂಡ್, ಉತ್ತರಪ್ರದೇಶ, ಬಿಹಾರ, ಗೋವಾ ಮತ್ತು ಗುಜರಾತ ರಾಜ್ಯಗಳು ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಈ ಮಹಾವಿದ್ಯಾಲಯವು ಅತ್ಯಾಧುನಿಕ ಮೂಲ ಸೌಕರ್ಯಗಳನ್ನು ಹೊಂದಿದೆ. ಸುಸಜ್ಜಿತ ಕಟ್ಟಡಗಳು, ಅತ್ಯಾಧುನಿಕ ಪ್ರಯೋಗಾಲಯ, ಡಿಜಿಟಲ್ ಗ್ರಂಥಾಲಯ, ವೈಫೈ ಕ್ಯಾಂಪಸ್, ಕೆಫೆಟೆರಿಯಾ, ವಿಶಾಲ ಆಟದ ಮೈದಾನ ಶೈಕ್ಷಣಿಕ ವ್ಯವಸ್ಥೆಗೆ ಪೂರಕ ವಾತಾವರಣವನ್ನು ಇಲ್ಲಿ ನಿರ್ಮಿಸಲಾಗಿದೆ. ಪ್ಲೇಸ್‌ಮೆಂಟ್ ಸೆಲ್: ದೇಶದ ವಿವಿಧ ಕಂಪನಿಗಳ ತಜ್ಞರಿಂದ ಕಾರ್ಯಾಗಾರ ಹಾಗೂ ತರಬೇತಿಯನ್ನು ಮಹಾ ವಿದ್ಯಾಲಯದಲ್ಲಿ ಏರ್ಪಡಿಸಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಸಂವಹನ ಮತ್ತು ಸಂದರ್ಶನ ಕಲೆಯನ್ನು ಕರಗತಗೊಳಿಸಲು ಲ್ಯಾಂಗ್ವೇಜ್ ಲ್ಯಾಬ್ ಹಾಗೂ ಆಕ್ಟಿವಿಟಿ ರೂಮ್ ಸ್ಥಾಪಿಸಲಾಗಿದೆ. ಬೆಂಗಳೂರಿನ ರ್ಯಾರೋ, ಡೇರ್ ಟು ಡ್ರೀಮ್, ಓರ್ಯಾಕಲ್ ಯುನಿವರ್ಸಿಟಿ, ಓಲೀವ್ ಬೋರ್ಡ್ ತರಬೇತಿ ಸಂಸ್ಥೆಗಳು ಹಾಗೂ ಹಲವಾರು ತಜ್ಞರು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ತರಬೇತಿ ನೀಡುತಿದ್ದಾರೆ. ಇದರ ಫಲವಾಗಿ ಕಳೆದ ಶೈಕ್ಷಣಿಕ ವರ್ಷದಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷವೂ ಮಹಾವಿದ್ಯಾಲಯದಲ್ಲಿ 2 ದಿನಗಳ ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಹಾಗೂ ಪ್ರಾಧ್ಯಾಪಕರ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ದೇಶದ ತಾಂತ್ರಿಕ ಶಿಕ್ಷಣದಲ್ಲಿ ಮುಂಚೂಣಿಯಲ್ಲಿರುವ ಐಐಟಿ ಮುಂಬಯಿ ಹಾಗೂ ಐಐಟಿ ಖರಗಪುರ ಸಹಭಾಗಿತ್ವದೊಂದಿಗೆ ಹಾಗೂ ಕೇಂದ್ರ ಸರಕಾರದ ಮಾನವಸಂಪನ್ಮೂಲ ಇಲಾಖೆ ವತಿಯಿಂದ ಕಾಲೇಜಿನಲ್ಲಿ ವಿವಿಧ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತಿದೆ.
Related Articles
Advertisement
ಮಾದರಿ ಕಾಲೇಜು ಪ್ರಶಸ್ತಿಗಡಿಭಾಗದಲ್ಲಿ ಶಿಸ್ತುಬದ್ಧ, ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುತ್ತಿರುವುದನ್ನು ಗಮನಿಸಿ ಇತ್ತೀಚೆಗೆ ನಡೆದ ವಿಟಿಯು 20ನೆಯ ಸಂಸ್ಥಾಪನಾ ದಿನಾಚರಣೆಯಂದು ಕಾಲೇಜಿಗೆ ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ಮಾದರಿ ಇಂಜಿನಿಯರಿಂಗ್ ಕಾಲೇಜು ಪ್ರಶಸ್ತಿ ನೀಡಲಾಗಿದೆ.