ಬೆಂಗಳೂರು: “ಮೋಟಾರು ವಾಹನ (ತಿದ್ದುಪಡಿ) ಮಸೂದೆ-2017′ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರೆ ನೀಡಿದ್ದ ದೇಶಾದ್ಯಂತ ಬಂದ್‌ಗೆ ರಾಜ್ಯದಲ್ಲಿ ಮಂಗಳವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಂಚಾರ ವ್ಯವಸ್ಥೆ ಬಹುತೇಕ ಸಾಮಾನ್ಯವಾಗಿತ್ತು. ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಬೆಂಗಳೂರು ಪ್ರವಾಸಿ ವಾಹನಗಳ ಮಾಲೀಕರ ಸಂಘ (ಬಿಟಿಟಿಒಎ), ಮ್ಯಾಕ್ಸಿಕ್ಯಾಬ್ ಚಾಲಕರ ಸಂಘ ಸೇರಿ ಪ್ರಮುಖ ಸಂಘಟನೆಗಳು ಬಂದ್‌ನಿಂದ ದೂರ ಉಳಿದವು. ಲಾರಿ ಮಾಲೀಕರು ಮತ್ತು ಏಜೆಂಟ್‌ರ ಸಂಘಟನೆಗಳು ಕೇವಲ ನೈತಿಕ
ಬೆಂಬಲ ವ್ಯಕ್ತಪಡಿಸಿದವು. ಪರಿಣಾಮ ಬಂದ್ ಬಿಸಿ ನಿರೀಕ್ಷಿತ ಮಟ್ಟದಲ್ಲಿ ತಟ್ಟಲಿಲ್ಲ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಒಳಗೊಂಡಂತೆ ನಾಲ್ಕೂ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಬಸ್ ಸಂಚಾರ ಎಂದಿನಂತೆ ಇತ್ತು. “ನಮ್ಮ ಮೆಟ್ರೋ’ ಸೇವೆಯಲ್ಲಿ ವ್ಯತ್ಯಾಸ ಆಗಲಿಲ್ಲ. ಈ ಮಧ್ಯೆ ನಗರದಲ್ಲಿ
ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದರು.