Advertisement

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

03:57 PM Apr 19, 2021 | Team Udayavani |

ನವದೆಹಲಿ:ಭಾರತದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ ನೀಡುವುದನ್ನು ರದ್ದುಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಏಪ್ರಿಲ್ ತಿಂಗಳಾಂತ್ಯದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರ ಜತೆ ವರ್ಚುವಲ್ (ವಿಡಿಯೋ ಕಾನ್ಫರೆನ್ಸ್) ಸಭೆ ನಡೆಸಿ ಮಾತುಕತೆ ನಡೆಸುವುದಾಗಿ ಜಾನ್ಸನ್ ತಿಳಿಸಿದ್ದಾರೆ.

ಭಾರತದಲ್ಲಿನ ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಏಪ್ರಿಲ್ 25ರ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಉಭಯ ದೇಶಗಳು ವರ್ಚುವಲ್ ಸಭೆ ಮೂಲಕ ಮಾತುಕತೆ ನಡೆಸಲಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next