Advertisement

ಬೊರಿವಲಿ ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌: ಗೂಡುದೀಪ ಸ್ಪರ್ಧೆ

04:21 PM Nov 10, 2018 | Team Udayavani |

ಮುಂಬಯಿ: ಬೊರಿವಲಿ ಪೂರ್ವದ ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌ನ ವಿದ್ಯಾರ್ಥಿಗಳಿಂದ ದೀಪಾ ವಳಿಯ ಅಂಗವಾಗಿ ಗೂಡುದೀಪಗಳ ಸ್ಪರ್ಧೆ ಮತ್ತು ಪ್ರದರ್ಶನವನ್ನು ಆಯೋಜಿಸಲಾಯಿತು.

Advertisement

ಶಾಲೆಯ ಎಲ್ಲ ವರ್ಗಗಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ದ್ದರು.  ದೀಪಾವಳಿ ಹಬ್ಬದ ವಿಶೇಷತೆ ಹಾಗೂ ಸಂದೇಶಗಳನ್ನು ವಿದ್ಯಾರ್ಥಿ ಗಳು ಸ್ಪರ್ಧೆಯಲ್ಲಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದೇ ಸಂದರ್ಭದಲ್ಲಿ ವಿಜೇತ ಸ್ಪರ್ಧಿಗಳಿಗೆ ಶಾಲೆಯ ಸಂಚಾಲಕ ಡಾ| ಎ. ಎಫ್‌ ಪಿಂಟೋ ಹಾಗೂ ಆಡಳಿತ ನಿರ್ದೇಶಕಿ ಮೇಡಂ ಗ್ರೇಸ್‌ ಪಿಂಟೋ ಅವರು ಬಹುಮಾನ ವಿತರಿಸಿ ಶುಭಹಾರೈಸಿದರು. ಶಾಲೆಯ ಪ್ರಾಂಶುಪಾಲೆ ಮಾರಿಯಟ್‌ ಫೆರ್ನಾಂಡಿಸ್‌ ಅವರು ಕಾರ್ಯಕ್ರಮ ನಿರ್ವಹಿಸಿದರು.

ಶಾಲಾ ಸಂಚಾಲಕ ಡಾ| ಎ. ಎಫ್‌. ಪಿಂಟೋ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪರಿಸರ ಸ್ನೇಹಿ ಗೂಡುದೀಪಗಳು, ಲಾಟೀನ್‌ಗಳನ್ನು ವಿದ್ಯಾರ್ಥಿಗಳು ಸುಂದರವಾಗಿ ರಚಿಸಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಶಾಲಾ ಶಿಕ್ಷಕರನ್ನು ಅಭಿನಂದಿಸುತ್ತಿದ್ದೇನೆ ಎಂದರು.

ನೂರಾರು ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು, ತೀರ್ಪುಗಾರರು, ಶಿಕ್ಷಕ-ಶಿಕ್ಷಕಿಯರು, ಶಿಕ್ಷಕೇತರ ಸಿಬಂದಿಗಳು, ವಿವಿಧ ವಿಭಾಗಗಳ ಮುಖ್ಯಶಿಕ್ಷಕರು, ಆಹ್ವಾನಿತ ಅತಿಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next