ಉತ್ತರ ಪ್ರದೇಶ: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯ ದಿನದಂದು ಸೋಮವಾರ ಫಿರೋಜಾಬಾದ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿ ‘ರಾಮ್ ರಹೀಮ್’ ಎಂದು ಹೆಸರಿಡುವ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯ ಸಂದೇಶವನ್ನು ಸಾರಿದ್ದಾರೆ.
ಫಿರೋಜಾಬಾದ್ ಫರ್ಜಾನಾ ಎಂಬ ಮಹಿಳೆ ಸೋಮವಾರ ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗು ಹಾಗೂ ತಾಯಿ ಆರೋಗ್ಯವಾಗಿದ್ದರೆ ಎಂದು ಪ್ರಭಾರಿ ಡಾ.ನವೀನ್ ಜೈನ್ ತಿಳಿಸಿದ್ದಾರೆ.
ರಾಮ ಮಂದಿರದ ಉದ್ಘಾಟನೆಯ ದಿನದಂದೇ ಜನಿಸಿದ ಕಾರಣ ಮಗುವಿನ ಅಜ್ಜಿ ಹುಸ್ನಾ ಬಾನು ಅವರು ಮಗುವಿಗೆ ‘ರಾಮ್ ರಹೀಮ್’ ಎಂದು ಹೆಸರಿಟ್ಟಿದ್ದಾರೆ.
ಹಿಂದೂ-ಮುಸ್ಲಿಂ ಏಕತೆಯ ಸಂದೇಶ ನೀಡಲು ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟಿದ್ದೇನೆ ಎಂದು ಬಾನು ಹೇಳಿದ್ದಾರೆ.
ಕಾನ್ಪುರದ ಗಣೇಶ್ ಶಂಕರ್ ವಿದ್ಯಾರ್ಥಿ ಸ್ಮಾರಕ ವೈದ್ಯಕೀಯ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥೆಯಾಗಿರುವ ಸೀಮಾ ದ್ವಿವೇದಿ ಅವರ ಹೇಳಿಕೆಯಂತೆ ಸೋಮವಾರದಂದು ಇಲ್ಲಿನ ಆಸ್ಪತ್ರೆಯಲ್ಲಿ ಒಟ್ಟು 25 ಶಿಶುಗಳಿಗೆ ಜನ್ಮ ನೀಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: “ಉದಯವಾಣಿ ದೀಪಾವಳಿ ಧಮಾಕ’ ವಿಜೇತರಿಗೆ ಬಹುಮಾನ ವಿತರಣೆ