Advertisement

ಕಾಂಗ್ರೆಸ್‌ ಮತ್ತು ಭ್ರಷ್ಟಾಚಾರ ಎರಡೂ ಒಂದೇ

07:25 AM Oct 14, 2017 | |

ಬೆಂಗಳೂರು: ಕಾಂಗ್ರೆಸ್‌ ಮತ್ತು ಭ್ರಷ್ಟಾಚಾರ ಒಟ್ಟಿಗೆ ಇರುತ್ತದೆ ಎಂಬುದು ಮತ್ತೆ ಸಾಬೀತಾಗುತ್ತಿದ್ದು, ಇದಕ್ಕೆ ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ರಾಜ್ಯದ ಕಾಂಗ್ರೆಸ್‌ ಸರ್ಕಾರ ಸ್ಪಷ್ಟ ಉದಾಹರಣೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಆರೋಪಿಸಿದ್ದಾರೆ.

Advertisement

ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಅವರ ಸಚಿವ ಸಂಪುಟದ ಎಲ್ಲಾ ಸದಸ್ಯರ ಮೇಲೆ ಒಂದಲ್ಲಾ ಒಂದು ಭ್ರಷ್ಟಾಚಾರದ ಆರೋಪವಿದೆ. ಎಐಸಿಸಿ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಅವರ ವಿರುದ್ಧ ಕಾಂಗ್ರೆಸ್‌ನ ಸ್ನೇಹಿತ ಪಕ್ಷವಾದ ಸಿಪಿಎಂನ ಸರ್ಕಾರ ಆರೋಪಪಟ್ಟಿ ಸಲ್ಲಿಸಲು ಸಿದ್ಧವಾಗಿದೆ. ಹೀಗಾಗಿ ಕಾಂಗ್ರೆಸ್‌ ಭ್ರಷ್ಟಾಚಾರವನ್ನು ಅಲ್ಲಗಳೆಯುವ ಯಾವುದೇ ನೈತಿಕತೆ ಹೊಂದಿಲ್ಲ ಎಂದು ಹೇಳಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಚರ್ಚೆಗೆ ದಿನ ಮತ್ತು ಸ್ಥಳ ನಿಗದಿಪಡಿಸುವಂತೆ ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೂಮ್ಮೆ ಸವಾಲು ಹಾಕಿದರು. ಭ್ರಷ್ಟಾಚಾರ ಕುರಿತ ಚರ್ಚೆಗೆ ನಾವು (ಬಿಜೆಪಿ) ಯಾವಾಗ, ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧವಿದೆ. ಆದ್ದರಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸ್ಥಳ ಮತ್ತು ದಿನಾಂಕ ನಿಗದಿಪಡಿಸಬೇಕು ಎಂದರು.

ರಾಜ್ಯ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸುತ್ತಿರುವ ಬಗ್ಗೆಯೂ ಕಿಡಿ ಕಾರಿದ ಅವರು, ಕಳೆದ ನಾಲ್ಕೂವರೆ ವರ್ಷ ಕಾಂಗ್ರೆಸ್‌ ನಾಯಕರು ಎಲ್ಲಿ ಹೋಗಿದ್ದರು? ಕೇವಲ ಚುನಾವಣೆಗಾಗಿ ಈ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆಯೇ ಹೊರತು ಜನರ ಕಲ್ಯಾಣದ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next