Advertisement

ಇಬ್ಬರಿಗೆ ಷರತ್ತುಬದ್ಧ ಜಾಮೀನು ಮಂಜೂರು

01:46 AM Feb 06, 2019 | |

ಬೆಂಗಳೂರು: 2016ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ.

Advertisement

ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ನಾಗೇಂದ್ರ ಹಾಗೂ ತಿಮ್ಮೇಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿದ ನ್ಯಾ. ಬಿ.ಎ ಪಾಟೀಲ್‌ ಅವರಿದ್ದ ಏಕಸದಸ್ಯಪೀಠ, 2 ಲಕ್ಷ ರೂ. ಮೊತ್ತದ ಬಾಂಡ್‌ ಹಾಗೂ ಅಷ್ಟೇ ಮೊತ್ತದ ಇಬ್ಬರ ಭದ್ರತಾ ಖಾತರಿ ಸಲ್ಲಿಸುವಂತೆ ಶರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶಿಸಿತು.

ಇಬ್ಬರೂ ಆರೋಪಿಗಳ ವಿರುದ್ಧ ಈ ಹಿಂದೆ ಯಾವುದೇ ಕೋಕಾ ಪ್ರಕರಣ ದಾಖಲಾಗಿಲ್ಲ ಮತ್ತು ಈ ಪ್ರಕರಣದಲ್ಲಿ ಈಗಾಗಲೇ ತನಿಖೆ ಮುಕ್ತಾಯಗೊಂಡಿದೆ. ವಿಚಾರಣಾ ನ್ಯಾಯಾಲಯಕ್ಕೆ ದೋಷಾ ರೋಪಣೆ ಪಟ್ಟಿಯೂ ಸಲ್ಲಿಕೆಯಾಗಿದೆ ಎಂಬ ಅಂಶಗಳನ್ನು ಆಧರಿಸಿ ನ್ಯಾಯಪೀಠ ಜಾಮೀನು ನೀಡಿದೆ.

ದ್ವಿತೀಯ ಪಿ.ಯು ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಆರೋಪದಲ್ಲಿ 2016ರ ಡಿ.16ರಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next