ಉತ್ತರಾಖಂಡ: ಉತ್ತರಕಾಶಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಈ ನಡುವೆ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರಿನ ಮೇಲೆ ಬಂಡೆ ಕಲ್ಲುಗಳು ಉರುಳಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕಾಶಿಯಲ್ಲಿ ಸಂಭವಿಸಿದೆ.
ಉತ್ತರಾಖಂಡದ ಗಂಗೋತ್ರಿಯಲ್ಲಿ ತೀರ್ಥಯಾತ್ರೆ ಮುಗಿಸಿ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ತಂಡ ವಾಪಸ್ಸಾಗುತ್ತಿದ್ದಂತೆ ಈ ದುರ್ಘಟನೆ ನಡೆದಿದೆ. ಸುಮಾರು 30 ಮಂದಿ ಪ್ರಯಾಣಿಕರಿದ್ದ ಮೂರು ವಾಹನಗಳು ಗುಡ್ಡದ ಪಕ್ಕದ ರಸ್ತೆಯಲ್ಲಿ ಸಾಗುತ್ತಿದ್ದಾಗ ಬಂಡೆಕಲ್ಲುಗಳು ಉರುಳಿಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಲ್ಲಿ ಮಹಿಳೆಯೊಬ್ಬರು ಸೇರಿದ್ದು, ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಮೃತರೆಲ್ಲರೂ ಮಧ್ಯಪ್ರದೇಶದ ಇಂದೋರ್‌ನವರು ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರಿನ ಗುರುತೇ ಸಿಗದಂತಾ ಮಟ್ಟಕ್ಕೆ ಅಪ್ಪಚ್ಚಿಯಾಗಿದೆ ಕಾರಿನ ಒಳಗಿಂದ ದೇಹಗಳನ್ನು ಹೊರತೆಗೆಯಲು ಹರ ಸಾಹಸ ಪಡಬೇಕಾಯಿತು.
ಇದನ್ನೂ ಓದಿ: AI Technology: ಎಐ ತಂತ್ರಜ್ಞಾನ ಸಂಶೋಧನೆಯ ಪ್ರಮುಖ ವಿಜ್ಞಾನಿ ಭಾರತ ಮೂಲದ ರಾಜ್ ರೆಡ್ಡಿ…