ವೆಲ್ಲಿಂಗ್ಟನ್: ಭಾರತದ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟಿಸಲಾಗಿದೆ. ಆದರೆ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಮತ್ತು ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಅವರು ತಂಡದಲ್ಲಿ ಸ್ಥಾನ ಪಡೆದಿಲ್ಲ.
ನ್ಯೂಜಿಲೆಂಡ್ ಭಾರತ ವಿರುದ್ಧ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲು ಸಜ್ಜಾಗಿದೆ. ಮುಂಬರುವ ಸರಣಿಗಾಗಿ 13 ಜನರ ತಂಡವನ್ನು ಘೋಷಿಸಿದೆ. ಎರಡೂ ಮಾದರಿಗಳಲ್ಲಿ ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲಿದ್ದಾರೆ.
ಮಾರ್ಟಿನ್ ಗಪ್ಟಿಲ್ ಜಾಗದಲ್ಲಿ ಫಿನ್ ಅಲೆನ್ ಅವರನ್ನು ಆಯ್ಕೆ ಮಾಡಲಾಗಿದೆ. ಟಿ20 ವಿಶ್ವಕಪ್ ನಲ್ಲೂ ಅಲೆನ್ ಅವರೇ ಗಪ್ಟಿಲ್ ಜಾಗದಲ್ಲಿ ಆಡಿದ್ದಾರೆ. ಟ್ರೆಂಟ್ ಬೌಲ್ಟ್ ಅವರು ಸದ್ಯ ಕೇಂದ್ರೀಯ ಗುತ್ತಿಗೆಯಲ್ಲಿ ಇರದ ಕಾರಣ ಕುಟುಂಬದೊಂದಿಗೆ ಕಾಲ ಕಳೆಯಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ:ಅವತ್ತು ನನ್ನ ಮಾತು ಕೇಳಿದ್ದರೆ ಮಗಳು ಉಳಿಯುತ್ತಿದ್ದಳು… ಶ್ರದ್ದಾ ತಂದೆಯ ಕಣ್ಣಿರೀನ ಮಾತು
Related Articles
ನವೆಂಬರ್ 18ರಂಧು ಸರಣಿ ಆರಂಭವಾಗಲಿದೆ. ವೆಲ್ಲಿಂಗ್‌ಟನ್, ಟೌರಂಗಾ ಮತ್ತು ನೇಪಿಯರ್‌ನಲ್ಲಿ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಬಳಿಕ ಆಕ್ಲೆಂಡ್, ಹ್ಯಾಮಿಲ್ಟನ್ ಮತ್ತು ಕ್ರೈಸ್ಟ್ ಚರ್ಚ್‌ನಲ್ಲಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ.
ಕಿವೀಸ್ ತಂಡ: ಕೇನ್ ವಿಲಿಯಮ್ಸನ್ (ನಾ), ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿ.ಕೀ), ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ (ಏಕದಿನ), ಟಾಮ್ ಲ್ಯಾಥಮ್ (ಏಕದಿನ) (ವಿ.ಕೀ), ಡೇರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ (ಟಿ20), ಟಿಮ್ ಸೌಥಿ, ಬ್ಲೇರ್ ಟಿಕ್ನರ್ (ಟಿ20)