Advertisement
ನಗರದಲ್ಲಿ ವಾರ್ಡ್ ಸಂಖ್ಯೆ 6ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಕೀಲ ಮುನಿರಾಜು ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸಹಿತ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಗಲಿರುಳು ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನ ವರಿಕೆ ಮಾಡಿಕೊಟ್ಟರೂ ಸಹ ಮತದಾರರು ಬಿಜೆಪಿಗೆ ಆಶೀರ್ವದಿಸಿದ್ದಾರೆ. ಜನರ ನಿರ್ಧಾರ ಮತ್ತು ತೀರ್ಪಿಗೆ ತಲೆಬಾಗಿ ಪಕ್ಷ ಸಂಘಟನೆ ಮಾಡಲು ತೊಡಗುತ್ತೇವೆ ಎಂದರು.
Related Articles
Advertisement
ನಗರದ ವಿವಿಧ ವಾರ್ಡ್‌ಗಳಲ್ಲಿ ಗುಣಮಟ್ಟದ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸಲಾಗಿದೆ. ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಂದರ ಮತ್ತು ಸ್ವಚ್ಛ ಶಿಡ್ಲಘಟ್ಟ ನಗರವಾಗಿ ಪರಿವರ್ತನೆ ಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ವಾರ್ಡ್ ಸಂಖ್ಯೆ 06ರಲ್ಲಿ ಯುವ ವಕೀಲ ಮುನಿರಾಜುಗೆ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಶಾಶ್ವತ ಅಭಿವೃದ್ಧಿ ಕಾಮಗಾರಿ ನಡೆಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ವಕೀಲ ಮುನಿರಾಜು, ಮುಖಂಡರಾದ ಎಸ್.ರಹಮತುಲ್ಲಾ, ಹಸೇನ್ ಖಾನ್, ಜಿಪಂ ಮಾಜಿ ಅಧ್ಯಕ್ಷ ಎನ್.ಮುನಿಯಪ್ಪ, ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಳೇ ರಘು, ಕೃಷ್ಣ ಉಪಸ್ಥಿತರಿದ್ದರು.