ದಾವಣಗೆರೆ: ಇಡೀ ಜಗತ್ತಿಗೆ 12ನೇ ಶತಮಾನದಲ್ಲಿ ಕಾಯಕ ಶ್ರದ್ಧೆಯನ್ನು ಪರಿಚಯಿಸಿದವರು ಕಲ್ಯಾಣದ ಶರಣರರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಗ್ರಗಣ್ಯರು ಎಂದು ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಡಾ| ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಶುದ್ಧ ಕಾಯಕದಿಂದ ಗಳಿಸಿದ ಸಂಪತ್ತನ್ನು ನಾವು ಬಳಸಿ ಬೇರೆಯವರಿಗೂ ಸಹ ಹಂಚುವ ಮನೋಭಾವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳವುದರ ಜೊತೆಗೆ ಹಸಿದವರಿಗೆ ಅನ್ನ ನೀಡುವ ಕೆಲಸ ಮಾಡುವ ಮೂಲಕ ಎಲ್ಲರ ಮನೆಗಳು ಮಠಗಳಂತೆ ಕಾರ್ಯ ನಿರ್ವಹಿಸಬೇಕು ಎಂದು ಆಶಿಸಿದರು.
“ನಡೆದಾಡುವ ದೇವರು’ ಎಂದೇ ಕರೆಯಲ್ಪಡುತ್ತಿದ್ದಂತಹ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಯವರು ತಮ್ಮ ಜೀವಿತಾವ ಧಿಯುದ್ದಕ್ಕೂ ಸಾಮಾಜಿಕ ಸೇವೆಗಳ ಮೂಲಕ ವಿದ್ಯೆ, ಆಶ್ರಯ, ಅನ್ನ ದಾಸೋಹ ಮಾಡಿದವರು. ತ್ರಿವಿಧ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳಲ್ಲಿ ಜ್ಞಾನಜ್ಯೋತಿ ಬೆಳಗಿಸಿದ ಕೀರ್ತಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜೀಗಳಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿ ಕಾರಿ ಪೂಜಾರ್ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣಾ ಧಿಕಾರಿ ಮಂಜನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಎಸ್.ಆರ್. ಗಂಗಪ್ಪ , ಅಲ್ಪಸಂಖ್ಯಾತರ ಕಲ್ಯಾಣಾ ಧಿಕಾರಿ ಅವಿತ್ ಬಿದರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯ್‌ಕುಮಾರ್, ಗಂಗಾಮತ ಸಮಾಜದ ಅಧ್ಯಕ್ಷ ಬಿ.ಎಚ್. ಮಂಜುನಾಥ್ ಮಾಗಾನಹಳ್ಳಿ, ಚೌಡಯ್ಯ ಗುರುಪೀಠದ ಉಪಾಧ್ಯಕ್ಷ ಮಂಜುನಾಥ ಡಿ. ಪುಟಗನಾಳ್, ಕಾರ್ಯದರ್ಶಿ ಮಹೇಂದ್ರ ಹೆಬ್ಟಾಳ್, ನಿಂಗರಾಜ ಹಾವನೂರು, ಎಸ್.ಎಂ. ಸುರೇಶ್, ಯೋಗೇಶ್ ಹೊಸಕೆರೆ, ತಿಪ್ಪೇಶ್, ಶೋಭಾ ಮಂಜುನಾಥ, ಮೀನಾಕ್ಷಿ ವೆಂಕಟೇಶ್ ಇತರರು ಇದ್ದರು