Advertisement

Congress ತೊರೆದು ಬಿಜೆಪಿ ಸೇರ್ಪಡೆಯಾದ ಬಾಕ್ಸರ್ ವಿಜೇಂದರ್ ಸಿಂಗ್

03:22 PM Apr 03, 2024 | Team Udayavani |

ಹೊಸದಿಲ್ಲಿ: 2008 ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ್ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Advertisement

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ವಿಜೇಂದರ್ ಅವರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಿ ಸ್ವಾಗತಿಸಿದರು.

‘ದೇಶದ ಅಭಿವೃದ್ಧಿಗಾಗಿ ಮತ್ತು ಜನರ ಸೇವೆಗಾಗಿ ಇಂದು ಬಿಜೆಪಿ ಸೇರಿದ್ದೇನೆ’ ಎಂದು ವಿಜೇಂದರ್ ಹೇಳಿದರು. ವಿಜೇಂದರ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಅನುಭವಿಸಿದ್ದರು. ಒಲಿಂಪಿಕ್ ಇತಿಹಾಸದಲ್ಲಿ ಮೊದಲ ಪದಕ ಗೆದ್ದ ಭಾರತೀಯ ಬಾಕ್ಸರ್ ಖ್ಯಾತಿ ವಿಜೇಂದರ್ ಸಿಂಗ್ ಅವರದ್ದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next