Advertisement

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

10:00 PM Dec 18, 2024 | Team Udayavani |

ಹೈದರಾಬಾದ್‌: ಡಿ.4ರಂದು ಪುಷ್ಪ-2 ಚಿತ್ರದ ಪ್ರೀಮಿಯರ್‌ ಪ್ರದರ್ಶನದ ವೇಳೆ ಕಾಲು¤ಳಿತಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement

“ತೀವ್ರ ನಿಗಾ ಘಟಕದಲ್ಲಿ ದಾಖಲಾಗಿರುವ 8 ವರ್ಷದ ಶ್ರೀ ತೇಜ್‌ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಾಗ್ಯೂ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಹೈದರಾಬಾದ್‌ನ ಕಿಮ್ಸ್‌ ಆಸ್ಪತ್ರೆ ಹೇಳಿದೆ. “ಆಮ್ಲಜನಕ ಕೊರತೆಯಿಂದ ಬಾಲಕನ ಮಿದುಳಿಗೆ ಹಾನಿಯಾಗಿರಬಹುದು. ಆದ್ದರಿಂದ ಅವರ ಆರೋಗ್ಯ ಚೇತರಿಕೆಗೆ ಹೆಚ್ಚು ಸಮಯ ತಗುಲಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಇದನ್ನೂ ಓದಿ: Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Advertisement

Udayavani is now on Telegram. Click here to join our channel and stay updated with the latest news.

Next