Advertisement

ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತ್ಯು

11:31 AM Nov 15, 2022 | Team Udayavani |

ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ.

Advertisement

ಸಾಣೂರುಪದವು ಗಣೇಶ್ ಆದಿ ದ್ರಾವಿಡ ಅವರ ಪುತ್ರ ಕಾರ್ತಿಕ್ (16) ಮೃತಪಟ್ಟ ಬಾಲಕ.

ರಾತ್ರಿ 9 ಗಂಟೆಗೆ ಊಟ ಮುಗಿಸಿ ಮಲಗಿದ್ದು, 9.30 ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ. ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದು, ಅದರೆ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಕೈಕಂಬದ ಕ್ಲಿನಿಕ್ ಗೆ ಕರೆತರಲಾಗಿದೆ.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದಾಗ ವೈದ್ರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ . ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next