Advertisement
ವಿದ್ಯಾರಣ್ಯಪುರ ನಿವಾಸಿ ಶರತ್ ಕಾಂತರಾಜ್ ಕುಮಾರ್ (22) ಪ್ರಮುಖ ಆರೋಪಿ. ಬಂಧಿತರಿಂದ 8.5 ಲಕ್ಷ ರೂ. ಮೌಲ್ಯದ 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.ವೀಲಿಂಗ್ ಚಟ ಅಂಟಿಸಿಕೊಂಡಿರುವ ಶರತ್, ಐವರು ಬಾಲಕರ ತಂಡವನ್ನು ಕಟ್ಟಿಕೊಂಡಿದ್ದ. ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ. ಕೊಡಿಗೇಹಳ್ಳಿ, ಮಾಗಡಿ ರಸ್ತೆ, ಬಸವೇಶ್ವರನಗರ, ಚಾಮರಾಜಪೇಟೆ, ವಿದ್ಯಾರಣ್ಯಪುರ ಮುಂತಾದೆಡೆ ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಎ.30ರ ತಡರಾತ್ರಿ ನಾಕಾಬಂದಿ ಹಾಕಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಶರತ್ ಪೊಲೀಸರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ. ಈ ಬಗ್ಗೆ ಅನುಮಾನಗೊಂಡು ಪೊಲೀಸರು ಆತನನ್ನು ಹಿಂಬಾಲಿಸಿ ಹಿಡಿದು ಪರಿಶೀಲಿಸಿದಾಗ ವಾಹನ ಕಳವು ಬೆಳಕಿಗೆ ಬಂದಿದೆ. ಈತನ ಬಂಧನದಿಂದ 12 ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.