ದಾವಣಗೆರೆ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾಗಿರುವುದರಿಂದ ಕೂಡಲೇ ರಾಜೀನಾಮೆ ನೀಡಬೇಕು ಎಂದು ಶಾಸಕ ಬಿ.ಪಿ. ಹರೀಶ್ ಒತ್ತಾಯಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ನಡೆಸಲಾಗುವುದು. ಜಿಲ್ಲಾ ಬಿಜೆಪಿಯಿಂದಲೂ ರಾಜೀನಾಮೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಮುಡಾದಿಂದ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ 3.16 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವುದು 1992ರಲ್ಲಿ. ಪಾರ್ವತಮ್ಮ ಅವರ ಸಹೋದರ ಜಮೀನು ತೆಗೆದು ಕೊಂಡಿರುವುದು 2004ರಲ್ಲಿ. ಈಗಾಗಲೇ ಸ್ವಾಧೀನ ಪಡಿಸಿಕೊಂಡಿರುವ ಜಮೀನನ್ನು ಪಾರ್ವತಮ್ಮ ಅವರ ಸಹೋದರ ಹೇಗೆ ಖರೀದಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2013ರ ಚುನಾವಣೆಯಲ್ಲಿ ಮುಡಾ ನಿವೇಶನದ ಬಗ್ಗೆ ಮಾಹಿತಿಯನ್ನೇ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಹಕ್ಕನ್ನು ಕಿತ್ತುಕೊಂಡಿದ್ದಾರೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೆಂದಿಗೂ ಸೋಲನ್ನು ಒಪ್ಪಿದವರಲ್ಲ. ಹತಾಶರಾಗಿದ್ದಾರೆ. ಹಾಗಾಗಿ ಅಂತಿಮವಾಗಿ ಜಾತಿ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ದೂರಿದರು.