Advertisement

BPL ಕಾರ್ಡ್‌ ತಿದ್ದುಪಡಿಗೆ ಅವಕಾಶ

12:03 AM Oct 05, 2023 | Team Udayavani |

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೂಂದು ಅವಕಾಶ ನೀಡಿದೆ.

Advertisement

ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ ಒನ್‌ ಕೇಂದ್ರಗಳಲ್ಲಿ ಹೆಸರು ಸೇರ್ಪಡೆ, ಪರಿಷ್ಕರಣೆ ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳಿದ್ದರೂ ಮಾಡಿಸಿಕೊಳ್ಳಬಹುದು.
ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದು, ಹೆಸರಿನಲ್ಲಿನ ಲೋಪದೋಷಗಳ ತಿದ್ದುಪಡಿ, ವಿಳಾಸ ಬದಲಾವಣೆಯಂತಹ ಪರಿಷ್ಕರಣೆಗೆ ಅವಕಾಶ ಒದಗಿಸಲಾಗಿದೆ.

ಎಲ್ಲೆಲ್ಲಿ ?
 ಮೊದಲ ಹಂತದಲ್ಲಿ ಅ. 5ರಿಂದ 7ರ ವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
 ಎರಡನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಹಾವೇರಿ, ಕೊಡಗು, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಅವಕಾಶ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.