Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರ ಚುನಾವಣೆ ಸಹಿತ ಇತರ ಕಾರಣಗಳಿಂದ ಹೊಸ ಬಿಪಿಎಲ್ ಕಾರ್ಡ್‌ಗಳ ವಿತರಣೆಯನ್ನು ಸ್ಥಗಿತಗೊಳಿಸಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಇದನ್ನು ಗಂಭೀರವಾಗಿ ಪರಿಗಣಿಸಿ ಪುನರಾರಂಭಿಸಲಾಗಿದೆ. ಇದುವರೆಗೆ ಬಿಪಿಎಲ್ ಕಾರ್ಡ್‌ಗಳಿಗೆ ಸುಮಾರು 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳನ್ನು ಪರಿಶೀಲಿಸಿ ಅರ್ಹರಿಗೆ ವಿತರಿಸಲಾಗುವುದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಕಾರ್ಡ್‌ಗಳು ದೊರೆಯಬೇಕಾಗಿದೆ. ನಕಲಿ ಕಾರ್ಡ್‌ಗಳ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ನ್ಯಾ| ಸದಾಶಿವ ಆಯೋಗ ವರದಿ ಜಾರಿ ಕುರಿತು ಹಿಂದೆ ಏಕತಾ ಸಮಾವೇಶ ಸಹಿತ ಹಲವು ಕಡೆ ಭರವಸೆಯನ್ನು ನೀಡಿದ್ದು, ಈ ಬಗ್ಗೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ವಿವರವಾಗಿ ಹೇಳುವುದು ಸರಿಯಲ್ಲ. ಆದರೆ ವರದಿ ಜಾರಿ ಬಗ್ಗೆ ನೀಡಿದ ಭರವಸೆಯನ್ನು ನಾವು ಉಳಿಸಿಕೊಳ್ಳುತ್ತೇವೆ ಎಂದರು.