Advertisement
ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತತ್‌ಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರಗಿ ಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆಯಾ ಕ್ಷೇತ್ರಗಳ ಶಾಸಕರಿಗೆ ರದ್ದಾದ ಬಿಪಿಎಲ್ ಕಾರ್ಡ್‌ಗಳ ಪಟ್ಟಿ ರವಾನಿಸುತ್ತೇವೆ. ಅವರು ಸ್ಥಳೀಯವಾಗಿ ತಂಡ ರಚಿಸಿ, ಯಾವ ಅರ್ಹರಿಗೆ ಕಾರ್ಡ್ ರದ್ದಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಂಡದವರಿಗೂ ಮನೆ ಮನೆಗೆ ಹೋಗಿ, ಯಾರಿಗಾದರೂ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸುವಂತೆ ಜವಾಬ್ದಾರಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.