Advertisement
ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆಹಾರ ಭದ್ರತಾ ಕಾಯ್ದೆ ತಂದಿದ್ದು ಮನಮೋಹನ್ ಸಿಂಗ್ ಸರಕಾರವೇ ಹೊರತು ಬಿಜೆಪಿಯವರಲ್ಲ. ಬಿಜೆಪಿ ಮುಖಂಡ ಮುರಳಿ ಮನೋಹರ ಜೋಶಿ ಅವರು ಮತ ಭದ್ರತಾ ಕಾಯ್ದೆ ಎಂದು ಟೀಕಿಸಿದ್ದರು. ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ 7 ಕೆ.ಜಿ. ಕೊಡುತ್ತಿದ್ದ ಅಕ್ಕಿಯ ಪ್ರಮಾಣವನ್ನು 5 ಕೆ.ಜಿ.ಗೆ ಇಳಿಸಿದ್ದು ಬಿಜೆಪಿ ಸರಕಾರ ಎಂದರು.
ಶಕ್ತಿ ಯೋಜನೆ ಪರಿಷ್ಕರಣೆ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದನ್ನು ಬಿಡಿ. ನಾನೀಗ ಹೇಳುತ್ತಿದ್ದೇನಲ್ಲವೇ? ಅವರೂ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಯಾವ ಪರಿಷ್ಕರಣೆಯೂ ಇಲ್ಲ. ನಾವು ಕೊಟ್ಟ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಬಿಜೆಪಿಯವರು ಶೇ. 10ರಷ್ಟು ಭರವಸೆಗಳನ್ನೂ ಈಡೇರಿಸಿರಲಿಲ್ಲ. ಮೊದಲ ಸಂಪುಟ ಸಭೆಯಲ್ಲೇ 1 ಲಕ್ಷ ರೂ. ವರೆಗೆ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು. ಕೊನೆಗೂ ಸಾಲ ಮನ್ನಾ ಮಾಡಲಿಲ್ಲ. ನಾವು ಯಾವ ಅನುದಾನ ಕಡಿಮೆ ಮಾಡಿದ್ದೇವೆ ಹೇಳಿ? ಬಜೆಟ್‌ನಲ್ಲಿ 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.