Advertisement
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಯಿಂದ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಓಂ ನಮೋ ನಾರಾಯಣಾಯಃ ಜಪಯಜ್ಞ, ಭಜನೆ, ಮಹಾಪೂಜೆ, ಮಂಗಳಾರತಿ ಇನ್ನಿತರ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನಡೆದವು.
Related Articles
ಇದೇ ಸಂದರ್ಭದಲ್ಲಿ ನವಿಮುಂಬಯಿ ಸಮಾಜ ಸೇವಕ ಡಾ| ಹರೀಶ್ ಎಸ್. ಪೂಜಾರಿ ಹಾಗೂ ಬಿಲ್ಲವರ ಅಸೋಸಿಯೇಶನ್ ಇದರ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್ ಜಿ. ಪೂಜಾರಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.
ಬಿಲ್ಲವ ಅಸೋಸಿಯೇಶನ್ ಉಪಾಧ್ಯಕ್ಷರಾದ ಶಂಕರ ಡಿ. ಪೂಜಾರಿ, ದಯಾನಂದ್ ಆರ್. ಪೂಜಾರಿ, ಶ್ರೀನಿವಾಸ್ ಆರ್. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್. ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್ ಜಿ. ಪೂಜಾರಿ, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಗೌರವ ಕಾರ್ಯದರ್ಶಿ ಕೇಶವ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಧನಂಜಯ ಶಾಂತಿ, ಶೇಖರ ಶಾಂತಿ ಮತ್ತಿತರರು ನೆರವೇರಿಸಿದರು.
Advertisement
ಅಸೋಸಿಯೇಶನ್‌ನ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಇನ್ನಿತರ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಪ್ರಾದೇಶಿಕ, ಸ್ಥಳೀಯ ಕಚೇರಿಗಳ ಪ್ರತಿನಿಧಿಗಳು, ಭಾರತ್ ಬ್ಯಾಂಕ್‌ನ ನಿರ್ದೇಶಕರು, ಇತರ ಅಧಿಕಾರಿಗಳು, ಸದಸ್ಯ ಬಾಂಧವರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಗುರುದೇವರ ಅನುಗ್ರಹಕ್ಕೆ ಪಾತ್ರರಾದರು.
ಚಿತ್ರ-ವರದಿ: ಸುಭಾಷ್ ಶಿರಿಯ